ಆಸ್ಟ್ರೇಲಿಯಾ ಪ್ರವಾಸ: ಭಾರತ ಏಕದಿನ ತಂಡಕ್ಕೆ ಗಿಲ್ ನಾಯಕ; ರೋಹಿತ್, ಕೊಹ್ಲಿಗೆ ಸ್ಥಾನ

ಟಿ20 ಸರಣಿಗೆ ಸೂರ್ಯಕುಮಾರ್ ಯಾದವ್ ಅವರನ್ನು ನಾಯಕರನ್ನಾಗಿ ಮುಂದುವರಿಸಲಾಗಿದ್ದು, ಶುಭಮನ್ ಗಿಲ್ ಉಪನಾಯಕರಾಗಿ ಕಾರ್ಯನಿರ್ವಹಿಸಲಿದ್ದಾರೆ.

Update: 2025-10-04 09:48 GMT

ಭಾರತ ಕ್ರಿಕೆಟ್‌ ತಂಡ

Click the Play button to listen to article

ಭಾರತೀಯ ಕ್ರಿಕೆಟ್‌ನಲ್ಲಿ ಹೊಸ ನಾಯಕತ್ವದ ಶಕೆ ಆರಂಭವಾಗಿದ್ದು, ಯುವ ಆಟಗಾರ ಶುಭಮನ್ ಗಿಲ್ ಅವರನ್ನು ಆಸ್ಟ್ರೇಲಿಯಾ ಪ್ರವಾಸದ ಏಕದಿನ ಸರಣಿಗೆ ನೂತನ ನಾಯಕರನ್ನಾಗಿ ನೇಮಿಸಲಾಗಿದೆ. ರೋಹಿತ್ ಶರ್ಮಾ ಅವರ ಸ್ಥಾನವನ್ನು ಗಿಲ್ ತುಂಬಲಿದ್ದು, ಶ್ರೇಯಸ್ ಅಯ್ಯರ್ ಅವರನ್ನು ಉಪನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಅನುಭವಿ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರು ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಅಕ್ಟೋಬರ್ 19 ರಿಂದ ಆರಂಭವಾಗಲಿರುವ ಆಸ್ಟ್ರೇಲಿಯಾ ಪ್ರವಾಸದಲ್ಲಿ ಭಾರತ ತಂಡವು ಮೂರು ಏಕದಿನ ಪಂದ್ಯಗಳು ಮತ್ತು ಐದು ಟಿ20 ಪಂದ್ಯಗಳನ್ನು ಆಡಲಿದೆ.

ಟಿ20 ತಂಡಕ್ಕೆ ಸೂರ್ಯಕುಮಾರ್ ನಾಯಕ

ಟಿ20 ಸರಣಿಗೆ ಸೂರ್ಯಕುಮಾರ್ ಯಾದವ್ ಅವರನ್ನು ನಾಯಕರನ್ನಾಗಿ ಮುಂದುವರಿಸಲಾಗಿದ್ದು, ಶುಭಮನ್ ಗಿಲ್ ಉಪನಾಯಕರಾಗಿ ಕಾರ್ಯನಿರ್ವಹಿಸಲಿದ್ದಾರೆ.

ಭಾರತ ತಂಡಗಳು ಹೀಗಿವೆ

ಏಕದಿನ ತಂಡ: ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಅಕ್ಷರ್ ಪಟೇಲ್, ಕೆ.ಎಲ್. ರಾಹುಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಶ್‌ದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಯಶಸ್ವಿ ಜೈಸ್ವಾಲ್.

ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭಮನ್ ಗಿಲ್ (ಉಪನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವರುಣ್ ಚಕ್ರವರ್ತಿ, ಜಸ್‌ಪ್ರೀತ್ ಬುಮ್ರಾ, ಅರ್ಶ್‌ದೀಪ್ ಸಿಂಗ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್.

Tags:    

Similar News