ಹೋರಿ ಹಬ್ಬದ ಗೂಳಿ ತಿವಿದು ಕಾಲೇಜು ವಿದ್ಯಾರ್ಥಿ ಸಾವು
ಹೋರಿ ಹಬ್ಬ ವೀಕ್ಷಿಸುತ್ತಿದ್ದ ವೇಳೆ ಗೂಳಿಯೊಂದು ತಿವಿದು 19 ವರ್ಷದ ಕಾಲೇಜು ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.;
By : The Federal
Update: 2024-02-13 14:04 GMT
ಶಿವಮೊಗ್ಗ ಫೆ.13: ಹೋರಿ ಹಬ್ಬವನ್ನು ವೀಕ್ಷಿಸಲು ಹೋದ ಕಾಲೇಜು ವಿದ್ಯಾರ್ಥಿಯೊಬ್ಬನಿಗೆ ಹೋರಿ ತಿವಿದು ಸಾವನ್ನಪ್ಪಿರುವ ಘಟನೆ ಶಿಕಾರಿಪುರ ತಾಲೂಕಿನ ಕಲ್ಮನೆಯಲ್ಲಿ ನಡೆದಿದೆ.
ಮೃತರನ್ನು ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಹೊಸ ಮಳಲಿ ಗ್ರಾಮದ ನಿವಾಸಿ ಹಾಗೂ ಶಿಕಾರಿಪುರದ ಖಾಸಗಿ ಕಾಲೇಜಿನ ವಿದ್ಯಾರ್ಥಿ ಪುನೀತ್ ಆಚಾರ್ ಎಂದು ಗುರುತಿಸಲಾಗಿದೆ.
ಸೋಮವಾರ ಪುನೀತ್ ಕಲ್ಮನೆಗೆ ಹೋರಿ ಹಬ್ಬ ವೀಕ್ಷಿಸಲು ತೆರಳಿದ್ದ. ಜನ ನಡುವೆ ನಿಂತು ವೀಕ್ಷಿಸುತ್ತಿದ್ದಾಗ ಗೂಳಿಯೊಂದು ತಿವಿದು ತೀವ್ರವಾಗಿ ಗಾಯಗೊಂಡಿದ್ದು ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ ಎಂದು ಶಿವಮೊಗ್ಗ ಪೊಲೀಸರು ತಿಳಿಸಿದ್ದಾರೆ.