Maha Kumbh 2025 : ದೆಹಲಿ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ, ಐವರು ಮಕ್ಕಳು ಸೇರಿ 18 ಭಕ್ತರ ಸಾವು

Maha Kumbh 2025: ಏಕಕಾಲಕ್ಕೆ ಹಲವಾರು ಪ್ರಯಾಣಿಕರು ನುಗ್ಗಿದ ಕಾರಣ ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.;

Update: 2025-02-15 19:40 GMT

 ದೆಹಲಿ: ಶನಿವಾರ ರಾತ್ರಿ ನವದೆಹಲಿ ರೈಲ್ವೇ ನಿಲ್ದಾಣದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತ ಪ್ರಕರಣದಲ್ಲಿ  15 ಮಂದಿ ಸಾವನ್ನಪ್ಪಿದ್ದು, 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಲೋಕ್ ನಾರಾಯಣ ಜೈ ಪ್ರಕಾಶ್ (LNJP) ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಮೃತಪಟ್ಟವರಲ್ಲಿ ಇಬ್ಬರು ಮಕ್ಕಳು ಇದ್ದಾರೆ ಎಂದು ವರದಿಯಾಗಿವೆ. ಇವರೆಲ್ಲರೂ ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಐತಿಹಾಸಿಕ ಕುಂಭ ಮೇಳಕ್ಕೆ ಹೋಗಲು ನಿಲ್ದಾಣದಲ್ಲಿ ಸೇರಿದ್ದರು ಎಂದು ಪ್ರಾಥಮಿಕ ವರದಿಗಳು ಹೇಳಿವೆ. 

ಕಾಲ್ತುಳಿತದಲ್ಲಿ 10 ಮಹಿಳೆಯರು ಮತ್ತು ಮೂವರು ಮಕ್ಕಳು ಸೇರಿದಂತೆ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ ಹಾಗೂ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ಲಾಟ್​ಫಾರ್ಮ್​ 13 ಮತ್ತು 14ರಲ್ಲಿ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.  ಮಹಾ ಕುಂಭ ಮೇಳಕ್ಕೆ ಹೋಗಿದ್ದ ಸಾವಿರಾರು ಭಕ್ತರು ತಮ್ಮ ಊರಿಗೆ ತೆರಳುವ ರೈಲುಗಳನ್ನು ಹತ್ತಲು ಜಮಾಯಿಸಿದ್ದರಿಂದ ದುರ್ಘಟನೆ ಸಂಭವಿಸಿದೆ.  

ಭೀಕರ ಘಟನೆಗೆ ಸಾಕ್ಷಿಯಾಗಿರುವ ಹಲವು ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಇದರಲ್ಲಿ ಮಕ್ಕಳು ಪೋಷರಕರು ತಮ್ಮ ಸಾಮಾಗ್ರಿಗಳನ್ನು ಎಳೆದುಕೊಂಡು ಹೋಗುತ್ತಿರುವ ದೃಶ್ಯಗಳು ದಾಖಲಾಗಿವೆ.

ಆರಂಭಿಕ ವರದಿಗಳ ಪ್ರಕಾರ, ಭಾರಿ ಜನಸಂದಣಿಯಿಂದ ಉಸಿರಾಟದ ತೊಂದರೆ ಉಂಟಾಗಿ ನಾಲ್ಕು ಮಹಿಳೆಯರು ಪ್ರಜ್ಞಾಹೀನರಾಗಿದ್ದರು. ನಂತರ ಉಂಟಾದ ದೊಬಿಯಿಂದ ಹಲವರು ಮೃತಪಟ್ಟಿದ್ದಾರೆ.

ಏನಿದು ಘಟನೆ:

ಪ್ರಯಾಗರಾಜ್ ಎಕ್ಸ್‌ಪ್ರೆಸ್ ರೈಲು ನಿಲ್ದಾಣದ 14ನೇ ಪ್ಲ್ಯಾಟ್​ಫಾರ್ಮ್​ನಲ್ಲಿ ನಿಲ್ಲಿಸಿದ ವೇಳೆ ಭಾರಿ  ಪ್ರಮಾಣದ ಪ್ರಯಾಣಿಕರು ಹತ್ತಲು ಮುಂದಾದಾಗ ಘಟನೆ ಸಂಭವಿಸಿದೆ. ಸ್ವಾತಂತ್ರ್ಯ ಸೇನಾನಿ ಎಕ್ಸ್‌ಪ್ರೆಸ್ ಮತ್ತು ಭುವನೇಶ್ವರ ರಾಜಧಾನಿ ರೈಲುಗಳು ತಡವಾಗಿರುವುದು ಕೂಡ ಇದಕ್ಕೆ ಕಾರಣ.  ಪ್ರಯಾಣಿಕರು ಪ್ಲ್ಯಾಟ್​ಫಾರ್ಮ್​​ 12, 13, 14ರಲ್ಲಿಏಕಾಏಕಿ ಜಮಾಯಿಸಿದ್ದರು. ಅಧಿಕೃತ ಮೂಲಗಳ ಪ್ರಾ 1500 ಜನರಲ್  ಟಿಕೆಟ್‌ಗಳು ಮಾರಾಟವಾಗಿದ್ದವು, ಇದರಿಂದ ಜನಸಂದಣಿ ಅತಿಯಾಗಿ ಹೆಚ್ಚಾಗಿ ನಿಯಂತ್ರಣ ತಪ್ಪಿತು ಎಂದು ರೈಲ್ವೆ ಪೊಲೀಸ್ ಉಪ ಆಯುಕ್ತ (DCP) ಕೆ.ಪಿ.ಎಸ್. ಮಲ್ಹೋತ್ರಾ ಚತಿಳಿಸಿದ್ದಾರೆ.

Live Updates
2025-02-16 05:51 GMT

ಬಿಹಾರ ಮೂಲದ ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ನಿತೀಶ್

ನವದೆಹಲಿ: ನವದೆಹಲಿ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಬಗ್ಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಭಾನುವಾರ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ್ದಾರೆ.

ಜನನಿಬಿಡ ರೈಲ್ವೆ ನಿಲ್ದಾಣದಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವು ಮಂದಿ ಗಾಯಗೊಂಡಿದ್ದಾರೆ. ಕಾಲ್ತುಳಿತದಲ್ಲಿ ಸಾವನ್ನಪ್ಪಿದ ಬಿಹಾರದ ಜನರು ಮತ್ತು ಗಾಯಗೊಂಡವರ ನಿಖರ ಸಂಖ್ಯೆಯ ಬಗ್ಗೆ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

"ನವದೆಹಲಿ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತದಲ್ಲಿ ಸಂಭವಿಸಿದ ಸಾವುನೋವುಗಳ ಬಗ್ಗೆ ಸಿಎಂ ಸಂತಾಪ ಸೂಚಿಸಿದ್ದಾರೆ. ಘಟನೆಯಲ್ಲಿ ಬಿಹಾರ ಮೂಲದವರ ಸಾವಿನಿಂದ ಅವರು ತೀವ್ರ ದುಃಖಿತರಾಗಿದ್ದಾರೆ ಮತ್ತು ಮೃತರ ಕುಟುಂಬ ಸದಸ್ಯರಿಗೆ ತಲಾ 2 ಲಕ್ಷ ರೂ ಮತ್ತು ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ" ಎಂದು ಸಿಎಂಒ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ.

2025-02-16 05:14 GMT

ಕೇಜ್ರಿವಾಲ್ ಸಂತಾಪ



"ನವದೆಹಲಿ ರೈಲ್ವೆ ನಿಲ್ದಾಣದಲ್ಲಿ ನಡೆದ ಅಪಘಾತದಲ್ಲಿ ಮಹಾ ಕುಂಭ ಮೇಳಕ್ಕೆ ಹೋಗುವ ಭಕ್ತರ ದುರಂತ ಸಾವು ಅತ್ಯಂತ ದುಃಖಕರ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲಾ ಕುಟುಂಬಗಳಿಗೆ ನನ್ನ ಸಂತಾಪಗಳು" ಎಂದು ಟ್ವೀಟ್ ಮಾಡಿದ್ದಾರೆ. 

2025-02-16 05:12 GMT

ರಾಷ್ಟ್ರಪತಿಯಿಂದ ಸಂತಾಪ



2025-02-16 05:10 GMT

ಕುಸಿದು ಬಿದ್ದ ಮಹಿಳೆ, ಚಿತ್ರ ಇಲ್ಲಿದೆ




 


2025-02-16 05:05 GMT

ನ್ಯಾಯಕ್ಕಾಗಿ ಒವೈಸಿ ಒತ್ತಾಯ



2025-02-16 04:58 GMT

ಮಲ್ಲಿಕಾರ್ಜುನ ಖರ್ಗೆ ಟ್ವೀಟ್ ಮಾಡಿದ್ದಾರೆ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, "ನವದೆಹಲಿ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತದಲ್ಲಿ ಅನೇಕ ಜನರು ಸಾವನ್ನಪ್ಪಿದ್ದಾರೆ ಎಂಬ ಸುದ್ದಿ ಅತ್ಯಂತ ದುಃಖಕರ. ನಿಲ್ದಾಣದಿಂದ ಬರುವ ವೀಡಿಯೊಗಳು ಅತ್ಯಂತ ಹೃದಯ ವಿದ್ರಾವಕವಾಗಿವೆ ಎಂದು ಹೇಳಿದ್ದಾರೆ.

"ನವದೆಹಲಿ ರೈಲ್ವೆ ನಿಲ್ದಾಣದಲ್ಲಿ ಸಂಭವಿಸಿದ ಸಾವಿನ ಪ್ರಕರಣದಲ್ಲಿ ಸತ್ಯ ಮರೆಮಾಚುವ ನರೇಂದ್ರ ಮೋದಿ ಸರ್ಕಾರದ ಪ್ರಯತ್ನವು ಅತ್ಯಂತ ನಾಚಿಕೆಗೇಡಿನ ಸಂಗತಿ ಮತ್ತು ಖಂಡನೀಯ, ಎಂದು ಹೇಳಿದ್ದಾರೆ.

"ಸತ್ತ ಮತ್ತು ಗಾಯಗೊಂಡವರ ಸಂಖ್ಯೆಯನ್ನು ಆದಷ್ಟು ಬೇಗ ಘೋಷಿಸಬೇಕು ಮತ್ತು ಕಾಣೆಯಾದವರ ಗುರುತನ್ನು ಸಹ ಖಚಿತಪಡಿಸಿಕೊಳ್ಳಬೇಕು ಎಂದು ನಾವು ಒತ್ತಾಯಿಸುತ್ತೇವೆ ಎಂದು ಬರೆದಿದ್ದಾರೆ.



2025-02-16 04:54 GMT



2025-02-16 04:53 GMT

ರೈಲ್ವೆ ಇಲಾಖೆ ವೈಫಲ್ಯಕ್ಕೆ ರಾಹುಲ್ ಗಾಂಧಿ ಕಿಡಿ

"ನವದೆಹಲಿ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತದಿಂದಾಗಿ ಹಲವಾರು ಜನರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ ಎಂಬ ಸುದ್ದಿ ಅತ್ಯಂತ ದುಃಖಕರ ಮತ್ತು ದುಃಖಕರವಾಗಿದೆ ಎಂದು ರಾಹುಲ್ ಗಾಂಧಿ ಹೇಳಿಕೆ ನೀಡಿದ್ದಾರೆ .

"ದುಃಖಿತ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸುತ್ತೇನೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಆಶಿಸುತ್ತೇನೆ ಎಂದು ಬರೆದಿದ್ದಾರೆ.

"ಈ ಘಟನೆಯು ರೈಲ್ವೆಯ ವೈಫಲ್ಯ ಮತ್ತು ಸರ್ಕಾರದ ಸಂವೇದನಾರಹಿತ ಆಡಳಿತವನ್ನು ಎತ್ತಿ ತೋರಿಸುತ್ತದೆ ಎಂದು ಅವರು ಹೇಳಿದ್ದಾರೆ.

"ಪ್ರಯಾಗ್​ರಾಜ್​​ಗೆ ಹೋಗುವ ಹೆಚ್ಚಿನ ಸಂಖ್ಯೆಯ ಭಕ್ತರನ್ನು ಪರಿಗಣಿಸಿ, ನಿಲ್ದಾಣದಲ್ಲಿ ಉತ್ತಮ ವ್ಯವಸ್ಥೆಗಳನ್ನು ಮಾಡಬೇಕಾಗಿತ್ತು, ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

"ದುರಾಡಳಿತ ಮತ್ತು ನಿರ್ಲಕ್ಷ್ಯದಿಂದಾಗಿ ಯಾರೂ ಪ್ರಾಣ ಕಳೆದುಕೊಳ್ಳದಂತೆ ಸರ್ಕಾರ ಮತ್ತು ಆಡಳಿತವು ವ್ಯವಸ್ಥೆ ಮಾಡಬೇಕು " ಎಂದು ಅವರು ಒತ್ತಾಯಿಸಿದ್ದಾರೆ. 

2025-02-16 04:51 GMT

ರೈಲ್ವೆ ಸಚಿವರ ಹೇಳಿಕೆ ಇಲ್ಲಿದೆ, ಎಕ್ಸ್​ ಪೋಸ್ಟ್​​



Tags:    

Similar News