Asaram Bapu: ಅತ್ಯಾಚಾರ ಪ್ರಕರಣ; ಸ್ವಯಂಘೋಷಿತ ದೇವಮಾನವ ಅಸಾರಾಮ್ ಬಾಪುಗೆ ಬೇಲ್
Asaram Bapu: ನ್ಯಾಯಮೂರ್ತಿಗಳಾದ ಎಂ.ಎಂ.ಸುಂದರೇಶ್ ಮತ್ತು ರಾಜೇಶ್ ಬಿಂದಾಲ್ ಅವರಿದ್ದ ನ್ಯಾಯಪೀಠವು ಈ ತೀರ್ಪು ನೀಡಿದೆ. ಆದರೆ, ಹೊರಗೆ ಬಂದ ಅನುಯಾಯಿಗಳನ್ನು ಭೇಟಿಯಾಗದಂತೆ ನಿರ್ದೇಶನವನ್ನೂ ನೀಡಿದೆ.;
ಅತ್ಯಾಚಾರ ಪ್ರಕರಣವೊಂದರಲ್ಲಿ 2013ರಲ್ಲಿ ಜೈಲು ಸೇರಿದ್ದ ಸ್ವಯಂ ಘೋಷಿತ ದೇವಮಾನವ ಅಸಾರಾಮ್ ಬಾಪುಗೆ ಸುಪ್ರೀಂ ಕೋರ್ಟ್ ಮಾರ್ಚ್ 31ರವರೆಗೆ ಮಧ್ಯಂತರ ಜಾಮೀನು ನೀಡಿದೆ. ವೈದ್ಯಕೀಯ ಕಾರಣಗಳಿಗಾಗಿ ಅವರಿಗೆ ಬೇಲ್ ನೀಡಿದೆ ಎಂಬುದಾಗಿ ವರದಿಗಳು ಹೇಳಿವೆ.
ನ್ಯಾಯಮೂರ್ತಿಗಳಾದ ಎಂ.ಎಂ.ಸುಂದರೇಶ್ ಮತ್ತು ರಾಜೇಶ್ ಬಿಂದಾಲ್ ಅವರಿದ್ದ ನ್ಯಾಯಪೀಠವು ಈ ತೀರ್ಪು ನೀಡಿದೆ. ಆದರೆ, ಹೊರಗೆ ಬಂದ ಅನುಯಾಯಿಗಳನ್ನು ಭೇಟಿಯಾಗದಂತೆ ನಿರ್ದೇಶನವನ್ನೂ ನೀಡಿದೆ.
86 ವರ್ಷದ ಅಸಾರಾಮ್ ಅವರು ಹೃದಯ ಕಾಯಿಲೆಯ ಜೊತೆಗೆ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರಿಗೆ ಬೇಲ್ ನೀಡಲಾಗಿದೆ ಎಂದು ಸುಪ್ರೀಂ ಕೋರ್ಟ್ ಪೀಠ ಹೇಳಿದೆ.
2023ರಲ್ಲಿ ಗಾಂಧಿನಗರ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ರದ್ದು ಮಾಡುವಂತೆ ಕೋರಿ ಅಸಾರಾಮ್ ಸಲ್ಲಿಸಿದ್ದ ಮನವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗುಜರಾತ್ ಸರ್ಕಾರದ ಪ್ರತಿಕ್ರಿಯೆ ಕೇಳಿತ್ತು. ವೈದ್ಯಕೀಯ ಆಧಾರದ ಮೇಲೆ ಮಾತ್ರ ಈ ವಿಷಯವನ್ನು ಪರಿಶೀಲಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.
ಆಗಸ್ಟ್ 29, 2024 ರಂದು, ಗುಜರಾತ್ ಹೈಕೋರ್ಟ್ ಅಸಾರಾಮ್ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿತ್ತು, ಅವರಿಗೆ ಬೇಲ್ ನೀಡಲು ಯಾವುದೇ ಕಾರಣಗಳು ಇಲ್ಲ ಎಂದು ಹೇಳಿತ್ತು.
ಗಾಂಧಿನಗರದ ಬಳಿಯ ಆಶ್ರಮದಲ್ಲಿ ವಾಸಿಸುತ್ತಿದ್ದ ಮಹಿಳೆಯೊಬ್ಬರು 2013ರಲ್ಲಿ ಸಲ್ಲಿಸಿದ್ದ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯವು 2023ರ ಜನವರಿಯಲ್ಲಿ ಅಸಾರಾಮ್ ದೋಷಿ ಎಂದು ತೀರ್ಪು ನೀಡಿತ್ತು. ಮತ್ತೊಂದು ಅತ್ಯಾಚಾರ ಪ್ರಕರಣದಲ್ಲಿ ಅಸಾರಾಮ್ ಪ್ರಸ್ತುತ ರಾಜಸ್ಥಾನದ ಜೋಧಪುರ ಜೈಲಿನಲ್ಲಿದ್ದಾರೆ.