Suhas shetty murder case: ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಲ್ಲಿ ಇಬ್ಬರು ಹಿಂದೂಗಳು
ಸುಹಾಸ್ ಶೆಟ್ಟಿ ಕೊಲೆಯನ್ನು ಖಂಡಿಸಿ ಹಿಂದೂ ಸಂಘಟನೆಗಳು ಶುಕ್ರವಾರ ಮಂಗಳೂರು ಹಾಗೂ ದಕ್ಷಿಣ ಕನ್ನಡ ಬಂದ್‌ಗೆ ಕರೆ ನೀಡಿದ್ದವು.;
ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಪೊಲೀಸರು ಇದೀಗ 8 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಲ್ಲಿ ಇಬ್ಬರು ಹಿಂದೂ ಯುವಕರೂ ಸೇರಿದ್ದಾರೆ. ಮಂಗಳೂರು ಮೂಲದ ಸಫ್ವಾನ್ ಗ್ಯಾಂಗ್ ಸುಹಾಸ್‌ನನ್ನು ಹತ್ಯೆ ಮಾಡಿರುವುದು ಬಯಲಾಗಿದೆ. ಬಂಧಿತರನ್ನು ಸಫ್ವಾನ್(29), ನಿಯಾಜ್(28),ಮೊಹಮ್ಮದ್ ಮುಝಂಮಿಲ್(32), ಕಲಂದರ್ ಶಾಫಿ (31), ಮೊಹಮ್ಮದ್ ಇರಜವಾನ್(28), ಚಿಕ್ಕಮಗಳೂರಿನ ರಂಜಿತ್(19)ಹಾಗೂ ನಾಗರಾಜ್(20) ಎಂದು ಗುರುತಿಸಲಾಗಿದೆ.
ಸುಹಾಸ್ ಶೆಟ್ಟಿಯ ಸ್ನೇಹಿತ ಪ್ರಶಾಂತ್‌ಗೂ ಸಫ್ವಾನ್ ನಡುವೆ ಎರಡು ವರ್ಷಗಳ ಹಿಂದೆ ಗಲಾಟೆ ಉಂಟಾಗಿತ್ತು. 2023ರಲ್ಲಿ ಪ್ರಶಾಂತ್ ಸಫ್ವಾನ್‌ಗೆ ಚೂರಿ ಇರಿದಿದ್ದ. ಈ ವೇಳೆ ಸುಹಾಸ್ ಪ್ರಶಾಂತ್ ಪರವಾಗಿ ನಿಂತಿದ್ದ. ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಕೊಲೆ ಮಾಡಿದ ಬಳಿಕ ಪರಾರಿಯಾಗಿದ್ದ ಹಂತಕರು ಮಂಗಳೂರಿನಲ್ಲಿಯೇ ಅವಿತುಕೊಂಡಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು 8 ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಗೃಹಸಚಿವ ಜಿ.ಪರಮೇಶ್ವರ್ ಭೇಟಿ
ಸುಹಾಸ್ ಶೆಟ್ಟಿ ಕೊಲೆಯನ್ನು ಖಂಡಿಸಿ ಹಿಂದೂ ಸಂಘಟನೆಗಳು ಶುಕ್ರವಾರ ಮಂಗಳೂರು ಹಾಗೂ ದಕ್ಷಿಣ ಕನ್ನಡ ಬಂದ್‌ಗೆ ಕರೆ ನೀಡಿದ್ದವು. ಮಂಗಳೂರು ಬಂದ್ ಸಂಪೂರ್ಣ ಯಶಸ್ವಿಯಾಗಿತ್ತು. ಬಂದ್ ಉಲ್ಲಂಘಿಸಿ ಬೀದಿಗಿಳಿದ ಖಾಸಗಿ ಬಸ್ಸುಗಳಿಗೆ ಕಲ್ಲು ತೂರಲಾಗಿತ್ತು. ಉಡುಪಿಯಲ್ಲಿ ಮುಸ್ಲಿಂ ಯುವಕನೊಬ್ಬನಿಗೆ ಇರಿಯಲಾಗಿದೆ.