Mysuru Dasara 2024 | ಅಂತರರಾಜ್ಯ ಪ್ರವಾಸಿ ವಾಹನಗಳಿಗೆ ಅ.12 ರವರೆಗೆ ತೆರಿಗೆ ವಿನಾಯ್ತಿ
ಕರ್ನಾಟಕ ಹೊರತುಪಡಿಸಿ ಇತರ ರಾಜ್ಯಗಳಲ್ಲಿ ನೊಂದಾಯಿಸಲ್ಪಟ್ಟ ಹಾಗೂ ಆ ರಾಜ್ಯದಲ್ಲಿ ತೆರಿಗೆ ಪಾವತಿಸುತ್ತಿರುವ ವಾಹನಗಳು 2024 ಅ.4ರಿಂದ 12 ರವರೆಗೆ ತೆರಿಗೆ ಪಾವತಿಯಿಂದ ವಿನಾಯಿತಿ ಪಡೆಯಬಹುದು.;
By : The Federal
Update: 2024-10-04 13:40 GMT
ಮೈಸೂರು ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಬರುವ ಅಂತರರಾಜ್ಯ ಪ್ರವಾಸಿ ವಾಹನಗಳಿಗೆ ತೆರಿಗೆ ಪಾವತಿಯಿಂದ ವಿನಾಯ್ತಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಕರ್ನಾಟಕ ಮೋಟಾರು ವಾಹನ ತೆರಿಗೆ ಅಧಿನಿಯಮದಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಸಾರ್ವಜನಿಕ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಪುಷ್ಪ.ವಿ.ಎಸ್. ಆದೇಶದಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಹೊರತುಪಡಿಸಿ ಇತರ ರಾಜ್ಯಗಳಲ್ಲಿ ನೋಂದಾಯಿಸಲ್ಪಟ್ಟ ಹಾಗೂ ಆ ರಾಜ್ಯದಲ್ಲಿ ತೆರಿಗೆ ಪಾವತಿಸುತ್ತಿರುವ ವಾಹನಗಳು 2024 ಅ.4 ರಿಂದ 12 ರವರೆಗೆ ತೆರಿಗೆ ಪಾವತಿಯಿಂದ ವಿನಾಯಿತಿ ಪಡೆಯಬಹುದು. ಈ ದಿನಗಳಲ್ಲಿ ಮೈಸೂರು ನಗರ ಹಾಗೂ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜಸಾಗರ ಜಲಾಶಯ ವೀಕ್ಷಿಸಲು ಬರುವ ವಾಹನಗಳಿಗೆ ಮಾತ್ರ ತೆರಿಗೆ ಪಾವತಿಯಿಂದ ವಿನಾಯ್ತಿ ಸಿಗಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.