ದೆಹಲಿ ವಿಮಾನ ನಿಲ್ದಾಣದಲ್ಲಿ ತಾಂತ್ರಿಕ ದೋಷ: 100ಕ್ಕೂ ಹೆಚ್ಚು ವಿಮಾನಗಳ ಹಾರಾಟ ವಿಳಂಬ
ರಾಷ್ಟ್ರ ರಾಜಧಾನಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು (IGIA) ದೇಶದ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣವಾಗಿದ್ದು, ಪ್ರತಿದಿನ 1,500ಕ್ಕೂ ಹೆಚ್ಚು ವಿಮಾನಗಳ ಹಾರಾಟವನ್ನು ನಿರ್ವಹಿಸುತ್ತದೆ.
ವಿಮಾನಗಳ ರದ್ದತಿಯಿಂದಾಗಿ ಪ್ರಯಾಣಿಕರು ಪರದಾಡುವಂತಾಯಿತು.
ಶುಕ್ರವಾರ (ನವೆಂಬರ್ 7) ಬೆಳಿಗ್ಗೆ ದೆಹಲಿ ವಿಮಾನ ನಿಲ್ದಾಣದ ಏರ್ ಟ್ರಾಫಿಕ್ ಕಂಟ್ರೋಲ್ (ATC) ವ್ಯವಸ್ಥೆಯಲ್ಲಿ ತಾಂತ್ರಿಕ ದೋಷ ಉಂಟಾದ ಕಾರಣ 100ಕ್ಕೂ ಹೆಚ್ಚು ವಿಮಾನಗಳ ಹಾರಾಟ ವಿಳಂಬವಾಗಿದೆ. ಅಧಿಕಾರಿಗಳು ಸಮಸ್ಯೆಯನ್ನು ಸರಿಪಡಿಸಲು ಶ್ರಮಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಷ್ಟ್ರ ರಾಜಧಾನಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು (IGIA) ದೇಶದ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣವಾಗಿದ್ದು, ಪ್ರತಿದಿನ 1,500ಕ್ಕೂ ಹೆಚ್ಚು ವಿಮಾನಗಳ ಹಾರಾಟವನ್ನು ನಿರ್ವಹಿಸುತ್ತದೆ.
ಗುರುವಾರ ಸಂಜೆಯಿಂದ (ನವೆಂಬರ್ 6) ಆಟೋಮ್ಯಾಟಿಕ್ ಮೆಸೇಜ್ ಸ್ವಿಚಿಂಗ್ ಸಿಸ್ಟಮ್‌ನಲ್ಲಿ (AMSS) ಉಂಟಾದ ಸಮಸ್ಯೆಯಿಂದಾಗಿ ಏರ್ ಟ್ರಾಫಿಕ್ ಕಂಟ್ರೋಲರ್‌ಗಳಿಗೆ ವಿಮಾನ ಹಾರಾಟದ ಯೋಜನೆಗಳು ಸ್ವಯಂಚಾಲಿತವಾಗಿ ಲಭ್ಯವಾಗುತ್ತಿಲ್ಲ. ಇದರಿಂದಾಗಿ ಅವರು ಲಭ್ಯವಿರುವ ಡೇಟಾದೊಂದಿಗೆ ಕೈಯಾರೆ ವಿಮಾನ ಹಾರಾಟದ ಯೋಜನೆಗಳನ್ನು ಸಿದ್ಧಪಡಿಸುತ್ತಿದ್ದಾರೆ.
ಇದು ಹೆಚ್ಚು ಸಮಯ ತೆಗೆದುಕೊಳ್ಳುವ ಪ್ರಕ್ರಿಯೆಯಾಗಿದ್ದು, ಪರಿಣಾಮವಾಗಿ ಅನೇಕ ವಿಮಾನಗಳು ವಿಳಂಬವಾಗುತ್ತಿವೆ. ಈ ಸಮಸ್ಯೆಯಿಂದ ವಿಮಾನ ನಿಲ್ದಾಣದಲ್ಲಿ ವಾಯು ಸಂಚಾರ ದಟ್ಟಣೆ ಕೂಡ ಉಂಟಾಗಿದೆ. ಫ್ಲೈಟ್‌ರಾಡಾರ್24.ಕಾಂ (Flightradar24.com) ವೆಬ್‌ಸೈಟ್‌ನ ಪ್ರಕಾರ, ದೆಹಲಿ ವಿಮಾನ ನಿಲ್ದಾಣದಿಂದ ಹೊರಡುವ ವಿಮಾನಗಳು ಸುಮಾರು 50 ನಿಮಿಷಗಳಷ್ಟು ವಿಳಂಬವನ್ನು ಎದುರಿಸುತ್ತಿವೆ.