ಹೈದರಾಬಾದ್, ಜೂನ್ 21- ತೆಲಂಗಾಣದ ಕಾಂಗ್ರೆಸ್ ಶಾಸಕ ಎಂ. ಸತ್ಯಂ ಅವರ ಪತ್ನಿ ರೂಪಾದೇವಿ, ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ರೂಪಾದೇವಿ ಪತ್ತೆಯಾಗಿದ್ದಾರೆ ಎಂದು ಗುರುವಾರ ರಾತ್ರಿ ಕುಟುಂಬದ ಸದಸ್ಯರು ತಿಳಿಸಿದರು ಎಂದು ಪೊಲೀಸರು ಶುಕ್ರವಾರ ಹೇಳಿದ್ದಾರೆ. ಅವರು ಆರೋಗ್ಯ ಸಮಸ್ಯೆಗಳಿಂದ ಈ ಆತ್ಯಂತಿಕ ಕ್ರಮ ಕೈಗೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ಎಂ. ಸತ್ಯಂ ಅವರು ತೆಲಂಗಾಣದ ಕರೀಂನಗರ ಜಿಲ್ಲೆಯ ಚೊಪ್ಪದಂಡಿ ಕ್ಷೇತ್ರವನ್ನು ಪ್ರತಿನಿಧಿಸುತ್ತಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತೆಲಂಗಾಣ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಸಾರಿಗೆ ಸಚಿವ ಪೊನ್ನಂ ಪ್ರಭಾಕರ್ ಸೇರಿದಂತೆ ಹಲವರು ಶಾಸಕರ ಕುಟುಂಬಕ್ಕೆ ಸಾಂತ್ವನ ಹೇಳಿದರು.