Allu Arjun : ಕಾಲ್ತುಳಿತದಲ್ಲಿ ಗಾಯಗೊಂಡ ಬಾಲಕನ ಆರೋಗ್ಯ ವಿಚಾರಿಸಿದ ಅಲ್ಲು ಅರ್ಜುನ್
Allu Arjun : ಡಿಸೆಂಬರ್ 4 ರಂದು ಕಾಲ್ತುಳಿತದಲ್ಲಿ ಮಹಿಳೆ ಮೃತಪಟ್ಟ ನಂತರ ಮತ್ತು ಅವರ ಎಂಟು ವರ್ಷದ ಮಗ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದೆ.;
ತೆಲುಗು ನಟ ಅಲ್ಲು ಅರ್ಜುನ್ ಅವರು ತಮ್ಮ ಇತ್ತೀಚಿನ ಚಿತ್ರ ʼಪುಷ್ಪಾ 2ʼ ಚಿತ್ರೀಕರಣದ ವೇಳೆ ಕಾಲ್ತುಳಿತಕ್ಕೆ ಒಳಗಾಗಿ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕನನ್ನು ಮಂಗಳವಾರ ಭೇಟಿಯಾದರು. ಈ ಹಿಂದೆ ಅರ್ಜುನ್ ಜನವರಿ 5 ರಂದು ಆಸ್ಪತ್ರೆಗೆ ಭೇಟಿ ನೀಡಲು ನಿರ್ಧರಿಸಿದ್ದರು. ಆದರೆ ಅವರ ಭೇಟಿಯನ್ನು ಕೊನೇ ಕ್ಷಣದಲ್ಲಿ ರದ್ದುಗೊಳಿಸಲಾಗಿತ್ತು.
ಡಿಸೆಂಬರ್ 4 ರಂದು ಕಾಲ್ತುಳಿತದಲ್ಲಿ ಮಹಿಳೆ ಮೃತಪಟ್ಟ ನಂತರ ಮತ್ತು ಅವರ ಎಂಟು ವರ್ಷದ ಮಗ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದೆ. ಬಳಿಕ ನಟನನ್ನು ಆರೋಪಿ ಸಂಖ್ಯೆ 11 ಎಂದು ಹೆಸರಿಸಿ ಬಂಧಿಸಲಾಗಿತ್ತು.
ಅಲ್ಲು ಅರ್ಜುನ್ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ತೆಲಂಗಾಣ ರಾಜ್ಯ ಚಲನಚಿತ್ರ ಅಭಿವೃದ್ಧಿ ನಿಗಮ (ಎಫ್‌ಡಿಸಿ) ಅಧ್ಯಕ್ಷ ದಿಲ್ ರಾಜು ಕೂಡ ಉಪಸ್ಥಿತರಿದ್ದರು. ನಟನ ಭೇಟಿಯ ದೃಷ್ಟಿಯಿಂದ ಆಸ್ಪತ್ರೆಯಲ್ಲಿ ಭದ್ರತೆ ಹೆಚ್ಚಿಸಲಾಗಿತ್ತು. ರಾಮಗೋಪಾಲಪೇಟೆ ಪೊಲೀಸ್ ಠಾಣೆಯ ಅಧಿಕಾರಿ ಅಲ್ಲು ಅರ್ಜುನ್ ಭೇಟಿ ನೀಡುವ ಬಗ್ಗೆ ನೋಟಿಸ್ ನೀಡಿದ್ದರು. ಆಸ್ಪತ್ರೆಯ ಸುತ್ತಮುತ್ತ ಸಾರ್ವಜನಿಕ ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ಅದನ್ನು ಗೌಪ್ಯವಾಗಿಡಲು ಸಲಹೆ ನೀಡಿದ್ದರು.
ಅವರ ಭೇಟಿಗೆ ಪೊಲೀಸರು ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಎಸ್ಎಚ್ಒ ಹೇಳಿದರು.
ಘಟನೆಯ ನಂತರ ಗಂಭೀರ ಸ್ವರೂಪದಲ್ಲಿ ಆಸ್ಪತ್ರೆ ಸೇರಿರುವ ಹುಡುಗನ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದೇನೆ ಎಂದು 'ಪುಷ್ಪ' ನಟ ಈ ಹಿಂದೆ ಹೇಳಿದ್ದರು. ಬಾಲಕ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದ ಅವರು, ಬಾಲಕನನ್ನು ಅವರ ಕುಟುಂಬವನ್ನು ಭೇಟಿಯಾಗಲಿದ್ದೇನೆ ಎಂದು ಹೇಳಿದ್ದರು. ಆದರೆ ಕಾನೂನು ಪ್ರಕ್ರಿಯೆಗಳು ನಡೆಯುತ್ತಿರುವ ಕಾರಣ ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದರು. .
ಡಿಸೆಂಬರ್ 4 ರಂದು ಹೈದರಾಬಾದ್‌ನಲ್ಲಿ ಸಂಧ್ಯಾ ಮಂದಿರದಲ್ಲಿ ಪುಷ್ಪಾ 2 ಪ್ರೀಮಿಯರ್ ಶೋ ಸಮಯದಲ್ಲಿ ನಟನನ್ನು ನೋಡಲು ಅಭಿಮಾನಿಗಳು ದೊಡ್ಡಪ್ರಮಾಣದಲ್ಲಿ ಜಮಾಯಿಸಿದ್ದರಿಂದ ಕಾಲ್ತುಳಿತ ಸಂಭವಿಸಿತ್ತು.
ದುರಂತದ ನಂತರ, ಅಲ್ಲು ಅರ್ಜುನ್, ಅವರ ಭದ್ರತಾ ತಂಡ ಮತ್ತು ಚಿತ್ರಮಂದಿರದ ಆಡಳಿತ ಮಂಡಳಿ ವಿರುದ್ಧ ಚಿಕ್ಕಡಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮೃತ ಮಹಿಳೆಯ ಕುಟುಂಬವು ನೀಡಿದ ದೂರಿನ ಆಧಾರದ ಮೇಲೆ ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್) ನ ವಿವಿಧ ವಿಭಾಗಗಳ ಅಡಿಯಲ್ಲಿ ಆರೋಪಗಳನ್ನು ದಾಖಲಿಸಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸೆಂಬರ್ 13 ರಂದು ಅವರನ್ನು ಬಂಧಿಸಲಾಗಿತ್ತು. ಆದರೆ, ತೆಲಂಗಾಣ ಹೈಕೋರ್ಟ್ ಡಿಸೆಂಬರ್ 14 ರಂದು ಅವರಿಗೆ ಮಧ್ಯಂತರ ಜಾಮೀನು ನೀಡಿದೆ. ಜನವರಿ 3ರಂದು ನಗರದ ನ್ಯಾಯಾಲಯವು ಅವರಿಗೆ ನಿಯಮಿತ ಜಾಮೀನು ನೀಡಿದೆ.