Tirupati laddu controversy | ಸಿಎಂ ಅವರಿಂದ ವರದಿ ಕೇಳಿದ ನಡ್ಡಾ

Update: 2024-09-20 10:57 GMT

ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರೊಂದಿಗೆ ಶುಕ್ರವಾರ ಮಾತನಾಡಿದ್ದು, ತಿರುಪತಿ ಲಡ್ಡು ವಿಷಯದ ಬಗ್ಗೆ ಸಂಪೂರ್ಣ ವರದಿಯನ್ನು ಕೇಳಿದ್ದಾರೆ.

ಈ ಬಗ್ಗೆ ಕೇಂದ್ರ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ಮೋದಿ ಸರ್ಕಾರದ ಮೂರನೇ ಅವಧಿಯ ಮೊದಲ 100 ದಿನಗಳ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಡ್ಡಾ, ʻಸಾಮಾಜಿಕ ಮಾಧ್ಯಮಗಳ ಮೂಲಕ ವಿಷಯ ತಿಳಿದಿದ್ದೇನೆ. ಇಂದು ಚಂದ್ರಬಾಬು ನಾಯ್ಡು ಅವರೊಂದಿಗೆ ಮಾತನಾಡಿದ್ದೇನೆ ಮತ್ತು ಸಂಪೂರ್ಣ ವರದಿಯನ್ನು ಕಳುಹಿಸಲು ಕೇಳಿದ್ದೇನೆ. ವರದಿ ಬಂದ ನಂತರ ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದು,ʼ ಎಂದು ತಿಳಿಸಿದರು.

ಜಗನ್ ಮೋಹನ್ ರೆಡ್ಡಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ನಾಯ್ಡು ಹೇಳಿದ್ದರು. ರಾಜಕೀಯ ಲಾಭಕ್ಕಾಗಿ ಮುಖ್ಯಮಂತ್ರಿ ಈ ʻಘೋರ ಆರೋಪʼ ಮಾಡಿದ್ದಾರೆ ಎಂದು ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷ (ವೈಎಸ್‌ಆರ್‌ಸಿಪಿ) ಆರೋಪಿಸಿತ್ತು.

ಇದು ಭಾರೀ ರಾಜಕೀಯ ಗದ್ದಲಕ್ಕೆ ಕಾರಣವಾಗಿದೆ.

Tags:    

Similar News