ಎಐಎಡಿಎಂಕೆ ನಾಯಕರು ಬಿಜೆಪಿಗೆ ಸೇರ್ಪಡೆ
ತಮಿಳುನಾಡಿನ ಮಾಜಿ ಶಾಸಕರು,ಸಂಸದರು ಸೇರಿದಂತೆ ಹಲವು ನಾಯಕರು ಅಣ್ಣಾಮಲೈ ಸಮ್ಮಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.;
By : The Federal
Update: 2024-02-08 03:02 GMT
ಹೊಸದಿಲ್ಲಿ: ತಮಿಳುನಾಡಿನ 15 ಮಾಜಿ ಶಾಸಕರು ಮತ್ತು ಮಾಜಿ ಸಂಸದರು ಸೇರಿದಂತೆ ಹಲವು ನಾಯಕರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ರಾಜ್ಯ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ನೇತೃತ್ವದಲ್ಲಿ ಈ ನಾಯಕರು ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಪಕ್ಷಕ್ಕೆ ಸ್ವಾಗತಿಸಿದರು.
ಸೇರ್ಪಡೆಗೊಂಡವರನ್ನು ಸ್ವಾಗತಿಸಿ ಮಾತನಾಡಿದ ಅಣ್ಣಾಮಲೈ, ಈ ನಾಯಕರು ಬಿಜೆಪಿಗೆ ಅನುಭವದ ಸಂಪತ್ತನ್ನೇ ಹೊತ್ತು ತಂದಿದ್ದಾರೆ. ಮೂರನೇ ಅವಧಿಗೆ ಮತ್ತೆ ಅಧಿಕಾರಕ್ಕೆ ಬರುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕೈಗಳನ್ನು ಬಲಪಡಿಸುತ್ತಾರೆ ಎಂದರು.
ತಮಿಳುನಾಡು ಭಾರತೀಯ ಜನತಾ ಪಕ್ಷದೆಡೆಗೆ ಹೋಗುತ್ತಿದೆ. ಇಷ್ಟು ದೊಡ್ಡ ಮಟ್ಟದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿರುವುದು ರಾಜ್ಯದಲ್ಲಿ ಮೋದಿಯವರ ಜನಪ್ರಿಯತೆಯನ್ನು ತೋರಿಸುತ್ತದೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 370 ಸ್ಥಾನಗಳನ್ನು ಗೆಲ್ಲಲಿದೆ ಎಂದು ಸಚಿವ ರಾಜೀವ್ ಚಂದ್ರಶೇಖರ್ ಸಂತಸ ವ್ಯಕ್ತಪಡಿಸಿದರು.