ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು (ಫೆ.1) ಲೋಕಸಭೆಯಲ್ಲಿ ಬಜೆಟ್ ಮಂಡಿಸಲಿದ್ದಾರೆ. ಶುಕ್ರವಾರ ಬಜೆಟ್ ಅಧಿವೇಶನ ಅರಂಭವಾಗಿದೆ. ಬೆಳಗ್ಗೆ 11 ಗಂಟೆಗೆ ನಿರ್ಮಲಾ ಸೀತಾರಾಮನ್ ತಮ್ಮ 8ನೇ ಬಜೆಟ್ ಮಂಡಿಸಲಿದ್ದಾರೆ. ಈ ಆಯವ್ಯಯದಲ್ಲಿ ಮಧ್ಯಮ ವರ್ಗದವರ ಮೇಲಿರುವ ಅಪಾರ ತೆರಿಗೆ ಹೊರೆಯ ಭಾರ ಇಳಿಸುವ ನಿರೀಕ್ಷೆ ಇದೆ. ಜತೆಗೆ ಮೂಲಸೌಕರ್ಯಗಳ ಅಭಿವೃದ್ಧಿಯ ಬೇಡಿಕೆಯೂ ಇದೆ. ಹೀಗಾಗಿ ಕೇತ್ರಕ್ಕೆ ಎಷ್ಟು ಅನುದಾನ ಸಿಗಲಿದೆ, ಯಾವೆಲ್ಲ ಹೊಸ ಯೋಜನೆಗಳು ಘೋಷಣೆಯಾಗಲಿವೆ ಎನ್ನುವ ಪ್ರಶ್ನೆ ಎದುರಾಗಿದೆ. ಎಷ್ಟು ಗಂಟೆಗೆ?ಶನಿವಾರ ಬೆಳಗ್ಗೆ 11 ಗಂಟೆಗೆ ಬಜೆಟ್ ಮಂಡನೆಯಾಗಲಿದೆ. ನಿರ್ಮಲಾ ಅವರು ಒಟ್ಟು ಎಂಟು ಬಜೆಟ್ ಇದುವರೆಗೆ ಮಂಡಿಸಿದ್ದಾರೆ.ಅದರಲ್ಲಿ 6 ಪೂರ್ಣ ಮತ್ತು 2 ಮಧ್ಯಂತರ ಬಜೆಟ್ಗಳು. ಈ ಹಿಂದೆ ಮೊರಾರ್ಜಿ ದೇಸಾಯಿ ಅವರು ಸತತ 6 ಬಾರಿ ಬಜೆಟ್ ಮಂಡಿಸಿ ದಾಖಲೆ ಬರೆದಿದ್ದರು. ಅವರು ಒಟ್ಟು 10 ಬಜೆಟ್ ಮಂಡಿಸಿದ್ದಾರೆ.ಲೈವ್ ವೀಕ್ಷಣೆ ಹೇಗೆ?ಸರ್ಕಾರದ ಅಧಿಕೃತ ವಾಹಿನಿಗಳಾದ ದೂರದರ್ಶನ ಮತ್ತು ಸಂಸದ್ ಟಿವಿಗಳು ಬಜೆಟ್ ಭಾಷಣದ ನೇರ ಪ್ರಸಾರ ಪ್ರಸಾರ ಮಾಡಲಿವೆ. ಜತೆಗೆ ಸಂಸತ್ತಿನ ಸಂಸದ್ ಟಿವಿ ಮತ್ತು ದೂರದರ್ಶನ ಯುಟ್ಯೂಬ್ ನಲ್ಲಿ ಬಜೆಟ್ ಮಂಡನೆಯ ನೇರ ಪ್ರಸಾರ ವೀಕ್ಷಿಸಬಹುದು. ಕೇಂದ್ರ ಬಜೆಟ್ 2025-26ರ ಪ್ರತಿ ಎಲ್ಲಿ ಸಿಗುತ್ತೆ?ಕೇಂದ್ರ ಬಜೆಟ್ 2025-26ರ ಬಜೆಟ್ ಪ್ರತಿ ಕೇಂದ್ರ ಸರ್ಕಾರದ ಯೂನಿಯನ್ ಬಜೆಟ್ ಮೊಬೈಲ್ ಆ್ಯಪ್ನಲ್ಲಿ ಪಿಡಿಎಫ್ ಪ್ರತಿಯ ರೂಪದಲ್ಲಿ ಲಭ್ಯವಿದೆ ಅಥವಾ ಯೂನಿಯನ್ ಬಜೆಟ್ ವೆಬ್ ಪೋರ್ಟಲ್ (www.indiabudget.gov.in)ನಲ್ಲೂ ದೊರೆಯಲಿದೆ. ನಿರೀಕ್ಷೆಗಳೇನು?ತೆರಿಗೆ ಕಡಿತ ಘೋಷಣೆ.ಮೂಲ ಸೌಕರ್ಯ ಅಭಿವೃದ್ಧಿ, ಮೆಟ್ರೊ, ರೈಲ್ವೆ ನೆಟ್ವರ್ಕ್, ಮಲ್ಟಿ ಮಾಡೆಲ್ ಕಾರಿಡಾರ್ಗಳು ನಗರ ಮತ್ತು ನಗರಗಳು ಸುತ್ತುಮುತ್ತಲು ವಾಣಿಜ್ಯೋದ್ದೇಶದ ರಿಯಾಲ್ಟಿ ಚಟುವಟಿಕೆಗಳ ಉತ್ತೇಜನಕ್ಕೆ ನೆರವು.ಸಿಮೆಂಟ್, ಉಕ್ಕಿನ ಜಿಎಸ್ಟಿ ಇಳಿಕೆ.ಮಹಿಳೆಯರ ಸಬಲೀಕರಣ ದೃಷ್ಟಿಯಿಂದ ಹಲವು ಯೋಜನೆಗಳು.ಉಚಿತ ಆಹಾರ ಧಾನ್ಯ ವಿತರಣೆ.ಪಿಎಂಎವೈ ಸ್ಕೀಮ್ ಅಡಿಯಲ್ಲಿ ಅಫರ್ಡೆಬಲ್ ಮನೆಗಳ ನಿರ್ಮಾಣ.ನರೇಗಾಕ್ಕೆ ಹೆಚ್ಚಿನ ಅನುದಾನ.ಉದ್ಯೋಗ ಸೃಷ್ಟಿಗೆ ಆದ್ಯತೆ.