ಮಹಾರಾಷ್ಟ್ರದಲ್ಲಿ ಕೇಂದ್ರ ಸಚಿವರ ಪುತ್ರಿಗೆ ಲೈಂಗಿಕ ಕಿರುಕುಳ!

ಮೂಲಗಳ ಪ್ರಕಾರ, ಅವರಲ್ಲಿ ಕೆಲವರು ಕ್ರಿಮಿನಲ್ ಹಿನ್ನೆಲೆಯನ್ನು ಹೊಂದಿದವರಾಗಿದ್ದಾರೆ. ಶಿವಸೇನೆ (ಏಕನಾಥ್ ಶಿಂಧೆ ಬಣ) ಶಾಸಕ ಚಂದ್ರಕಾಂತ್ ಪಾಟೀಲ್ ಅವರೊಂದಿಗೆ ಸಂಬಂಧ ಹೊಂದಿದ್ದಾರೆ.;

Update: 2025-03-02 09:56 GMT

ಮಹಾರಾಷ್ಟ್ರದ ಜಲ್​ಗಾಂವ್​ನಲ್ಲಿ 'ಸಂತ್​ ಮುಕ್ತೈ' ಯಾತ್ರೆಯ ಸಂದರ್ಭದಲ್ಲಿ ತನ್ನ ಅಪ್ರಾಪ್ತ ವಯಸ್ಸಿನ ಮಗಳು ಮತ್ತು ಇತರ ಬಾಲಕಿಯರಿಗೆ ಕಿರುಕುಳ ನೀಡಲಾಗಿದೆ ಎಂದು ಕೇಂದ್ರ ಸಚಿವೆ ರಕ್ಷಾ ಖಾಡ್ಸೆ ಭಾನುವಾರ ದೂರು ದಾಖಲಿಸಿದ್ದಾರೆ. ಕೆಲವು ಹುಡುಗರು ಕೃತ್ಯು ಎಸಗಿದ್ದಾರೆ ಎಂದುಅವರು ದೂರಿದ್ದಾರೆ.

"ಪ್ರತಿ ವರ್ಷ ಮಹಾಶಿವರಾತ್ರಿಯ ಸಂದರ್ಭದಲ್ಲಿ ಈ ಪ್ರದೇಶದಲ್ಲಿ 'ಸಂತ್​ ಮುಕ್ತೈ' ಯಾತ್ರೆ ನಡೆಸಲಾಗುತ್ತದೆ. ಎರಡು ದಿನಗಳ ಹಿಂದೆ, ನನ್ನ ಮಗಳು ಯಾತ್ರೆಗೆ ಹೋಗಿದ್ದಳು. ಕೆಲವು ಹುಡುಗರು ಆಕೆಗೆ ಕಿರುಕುಳ ನೀಡಿದ್ದಾರೆ. ಅವರ ವಿರುದ್ಧ ದೂರು ನೀಡಲು ನಾನು ಪೊಲೀಸ್ ಠಾಣೆಗೆ ಹೋಗಿದ್ದೆ" ಎಂದು ರಕ್ಷಾ ಖಾಡ್ಸೆ ಹೇಳಿದ್ದಾರೆ.

ಮೂಲಗಳ ಪ್ರಕಾರ, ಅವರಲ್ಲಿ ಕೆಲವರು ಕ್ರಿಮಿನಲ್ ಹಿನ್ನೆಲೆಯನ್ನು ಹೊಂದಿದವರಾಗಿದ್ದಾರೆ. ಶಿವಸೇನೆ (ಏಕನಾಥ್ ಶಿಂಧೆ ಬಣ) ಶಾಸಕ ಚಂದ್ರಕಾಂತ್ ಪಾಟೀಲ್ ಅವರೊಂದಿಗೆ ಸಂಬಂಧ ಹೊಂದಿದ್ದಾರೆ.

ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಆರೋಪಿಗಳನ್ನು ಸುಮ್ಮನೆ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

"ಒಂದು ಪಕ್ಷದ ಕೆಲವು ಪದಾಧಿಕಾರಿಗಳು ಇಂತಹ ಕೆಲಸ ಮಾಡಿದ್ದಾರೆ. ಇದು ಕೀಳುಮಟ್ಟದ ಕೃತ್ಯ. ಪೊಲೀಸರು ಪ್ರಕರಣ ದಾಖಲಿಸಿದ್ದು, ಕೆಲವರನ್ನು ಬಂಧಿಸಲಾಗಿದೆ. ಈ ರೀತಿಯ ಕಿರುಕುಳ ತಪ್ಪು. ಅವರನ್ನು ಕ್ಷಮಿಸಲಾಗುವುದಿಲ್ಲ ಮತ್ತು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು" ಎಂದು ಅವರು ಹೇಳಿದ್ದಾರೆ. .

ಈ ಪ್ರಕರಣವನ್ನು ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ, ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಲಾಗಿದೆ. ಇತರರನ್ನು ಬಂಧಿಸಲು ತಂಡಗಳನ್ನು ರಚಿಸಲಾಗಿದೆ.

Tags:    

Similar News