Jagdeep Dhankhar : ಉಪರಾಷ್ಟ್ರಪತಿ ಜಗದೀಪ್ ಧನಕರ್ ಆಸ್ಪತ್ರೆಗೆ ದಾಖಲು
ಉಪರಾಷ್ಟ್ರಪತಿಯ ಆರೋಗ್ಯ ಸ್ಥಿರವಾಗಿದ್ದು, ಅವರು ವೈದ್ಯಕೀಯ ಮೇಲ್ವಿಚಾರಣೆಯಲ್ಲಿದ್ದಾರೆ ಎಂದು ಪಿಟಿಐ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.;
By : The Federal
Update: 2025-03-09 04:30 GMT
ಉಪರಾಷ್ಟ್ರಪತಿ ಜಗದೀಪ್ ಧನಕರ್ (73) ಅವರು ಭಾನುವಾರ ಎಐಐಎಂಎಸ್ ದೆಹಲಿಗೆ ದಾಖಲಾಗಿದ್ದಾರೆ. ಅವರಿಗೆ ಹೃದಯದ ನೋವು ಉಂಟಾದ ಹಿನ್ನೆಲೆಯಲ್ಲಿ ರಾತ್ರಿ 2 ಗಂಟೆಯ ವೇಳೆಗೆ ಆಸ್ಪತ್ರೆಗೆ ವರ್ಗಾಯಿಸಲಾಯಿತು ಎಂದು ಮೂಲಗಳು ತಿಳಿಸಿವೆ.
ಪ್ರಸ್ತುತ ಅವರು ತೀವ್ರ ನಿಗಾ ಘಟಕ (CCU) ನಲ್ಲಿ ಮೇಲ್ವಿಚಾರಣೆಯಲ್ಲಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಏಮ್ಸ್ನ ಕಾರ್ಡಿಯಾಲಜಿ ವಿಭಾಗದ ಮುಖ್ಯಸ್ಥರಾದ ಡಾ. ರಾಜೀವ್ ನಾರಂಗ್ ಅವರ ನೇತೃತ್ವ ತಂಡ ಧನಕರ್ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ವೈದ್ಯರ ತಂಡವು ಅವರ ಆರೋಗ್ಯ ಸ್ಥಿತಿಯನ್ನು ನಿಯಮಿತವಾಗಿ ಗಮನಿಸುತ್ತಿದೆ ಎಂದು ವರದಿ ತಿಳಿಸಿದೆ.
ಉಪರಾಷ್ಟ್ರಪತಿಯ ಆರೋಗ್ಯ ಸ್ಥಿರವಾಗಿದ್ದು, ಅವರು ವೈದ್ಯಕೀಯ ಮೇಲ್ವಿಚಾರಣೆಯಲ್ಲಿದ್ದಾರೆ ಎಂದು ಪಿಟಿಐ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.