ರಾಹುಲ್ ಭೇಟಿ ಮಾಡಿದ ವಿನೇಶ್, ಬಜರಂಗ್
ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಫೋಗಟ್ ಮತ್ತು ಪುನಿಯಾ ಅವರನ್ನು ಕಣಕ್ಕಿಳಿಸುತ್ತದೆ ಎಂಬ ವದಂತಿಗಳ ನಡುವೆ ಈ ಭೇಟಿ ನಡೆದಿದೆ.;
ನವದೆಹಲಿಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಬುಧವಾರ (ಸೆಪ್ಟೆಂಬರ್ 4) ಭೇಟಿಯಾದರು.
ಮುಂದಿನ ತಿಂಗಳು ನಡೆಯಲಿರುವ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಫೋಗಟ್ ಮತ್ತು ಪುನಿಯಾ ಅವರನ್ನು ಕಣಕ್ಕಿಳಿಸುತ್ತದೆ ಎಂಬ ಊಹಾಪೋಹಗಳ ನಡುವೆ ಭೇಟಿ ನಡೆದಿದೆ. ಕಾಂಗ್ರೆಸ್ ಪಕ್ಷದ ಅಧಿಕೃತ ಎಕ್ಸ್ ಖಾತೆಯಲ್ಲಿ ಭೇಟಿಯ ಚಿತ್ರವನ್ನು ಹಂಚಿಕೊಂಡಿದೆ.
ಬಳಿಕ ಇಬ್ಬರೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿಯಾದರು.
2023 ರಲ್ಲಿ ಬಿಜೆಪಿ ಮಾಜಿ ಸಂಸದ ಮತ್ತು ಆಗಿನ ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಂದ ಲೈಂಗಿಕ ಕಿರುಕುಳವನ್ನು ಆರೋಪಿಸಿ ನಡೆದ ಪ್ರತಿಭಟನೆಯಲ್ಲಿ ಫೋಗಟ್ ಮತ್ತು ಪೂಣಿಯಾ ಭಾಗವಹಿಸಿದ್ದರು.
ಹರಿಯಾಣ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಸಮಿತಿಯು 90ರಲ್ಲಿ 66 ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದೆ. ಅಭ್ಯರ್ಥಿಗಳ ಪಟ್ಟಿ ಇನ್ನೆರಡು ದಿನದಲ್ಲಿ ಹೊರಬೀಳಲಿದೆ.
ಹರಿಯಾಣ ವಿಧಾನಸಭೆಗೆ ಅಕ್ಟೋಬರ್ 5 ರಂದು ಮತದಾನ ಹಾಗೂ 8 ರಂದು ಮತ ಎಣಿಕೆ ನಡೆಯಲಿದೆ.