ಮಣಿಪುರದಲ್ಲಿ ಹಿಂಸಾಚಾರ ಕಡಿಮೆಯಾಗುತ್ತಿದೆ: ಮೋದಿ
ಈಶಾನ್ಯ ರಾಜ್ಯ ಸಹಜ ಸ್ಥಿತಿಗೆ ಮರಳಲು ಕೇಂದ್ರವು ರಾಜ್ಯ ಸರ್ಕಾರ ಮತ್ತು ಇತರರೊಂದಿಗೆ ಕೆಲಸ ಮಾಡುತ್ತಿದೆ ಎಂದು ರಾಜ್ಯಸಭೆಯಲ್ಲಿ ಪ್ರಧಾನಿ ಹೇಳಿದರು.
By : The Federal
Update: 2024-07-03 09:59 GMT
ಹೊಸದಿಲ್ಲಿ, ಜು.3 - ಮಣಿಪುರದಲ್ಲಿ ಹಿಂಸಾಚಾರ ಕಡಿಮೆಯಾಗುತ್ತಿದ್ದು, ರಾಜ್ಯದ ಬಹುತೇಕ ಭಾಗಗಳಲ್ಲಿ ಶಾಲೆಗಳು ಪುನಾರಂಭಗೊಂಡಿವೆ ಮತ್ತು ಸಂಪೂರ್ಣ ಶಾಂತಿ ನೆಲೆಸುವಂತೆ ಸಕಲ ಪ್ರಯತ್ನ ಮಾಡಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದರು.
ರಾಜ್ಯಸಭೆಯಲ್ಲಿ ಮಾತನಾಡಿ, ರಾಜ್ಯ ಸಹಜ ಸ್ಥಿತಿಗೆ ಮರಳಲು ಕೇಂದ್ರವು ರಾಜ್ಯ ಸರ್ಕಾರ ಮತ್ತು ಇತರರೊಂದಿಗೆ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಸಂಸತ್ತಿನ ಜಂಟಿ ಅಧಿವೇಶನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಉತ್ತರಿಸಿ, ಮಣಿಪುರದಲ್ಲಿ 500 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಮತ್ತು 11,000 ಕ್ಕೂ ಅಧಿಕ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಹೇಳಿದರು.
ಮಣಿಪುರ ಪ್ರವಾಹ ಪರಿಸ್ಥಿತಿ ಎದುರಿಸುತ್ತಿದ್ದು, ಕೇಂದ್ರ ರಾಷ್ಟ್ರೀಯ ವಿಪತ್ತು ನಿರ್ವಹಣೆ ಪಡೆ(ಎನ್‌ಡಿಆರ್‌ಎಫ್)ಯ ಎರಡು ತಂಡಗಳನ್ನು ರಾಜ್ಯಕ್ಕೆ ರವಾನಿಸಿದೆ ಎಂದು ಹೇಳಿದರು.