Weather Updates | ಬಂಗಾಳಕೊಲ್ಲಿಯಲ್ಲಿ ಚಂಡಮಾರುತ: ಭಾರೀ ಮಳೆ ಸಾಧ್ಯತೆ
ಅ.23 ರಂದು ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರಚನೆಯಾಗುವ ಸಾಧ್ಯತೆಯಿದೆ. ಅದೇ ಸಮಯದಲ್ಲಿ ಅ.24 ರಂದು ಈ ಚಂಡಮಾರುತವು ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿಯನ್ನು ಅಪ್ಪಳಿಸಬಹುದು ಎಂದು ಹವಾಮಾನ ಇಲಾಖೆ ಹೇಳಿದೆ;
ಬಂಗಾಳಕೊಲ್ಲಿಯಲ್ಲಿ ಮತ್ತೆ ಚಂಡಮಾರುತದ ಭೀತಿ ಎದುರಾಗಿದೆ. ಅ.23 ರಂದು ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ರಚನೆಯಾಗುವ ಸಾಧ್ಯತೆಯಿದೆ. ಅ.24 ರಂದು ಚಂಡಮಾರುತವು ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿಯನ್ನು ಅಪ್ಪಳಿಸಬಹುದು. ಇದರಿಂದಾಗಿ ಈ ಪ್ರದೇಶಗಳಲ್ಲಿ ಬಲವಾದ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಅ.23 ರಿಂದ 25 ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಿರುವ ಹವಾಮಾನ ಇಲಾಖೆ, ಅ.23 ರಿಂದ ಒಡಿಶಾ-ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಗಂಟೆಗೆ 60ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಮತ್ತು ಕ್ರಮೇಣ ಗಂಟೆಗೆ 100-110 ಕಿ.ಮೀ.ಗೆ ತಲುಪಲಿದೆ. ಅ.24 ರ ರಾತ್ರಿಯಿಂದ ಅ.25 ರ ಬೆಳಿಗ್ಗೆ ವರೆಗೆ ಗಂಟೆಗೆ 120 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುತ್ತಿದೆ. ಕರಾವಳಿ ಜಿಲ್ಲೆಗಳಾದ ಪೂರ್ವ ಮಿಡ್ನಾಪುರ, ಪಶ್ಚಿಮ ಮಿಡ್ನಾಪುರ, ದಕ್ಷಿಣ 24 ಪರಗಣ ಮತ್ತು ಉತ್ತರ 24 ಪರಗಣ ಜಿಲ್ಲೆಗಳಲ್ಲಿ ಅ.23 ರಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅ.24 ಮತ್ತು 25 ರಂದು ಪೂರ್ವ ಮಿಡ್ನಾಪುರ, ಪಶ್ಚಿಮ ಮಿಡ್ನಾಪುರ, ದಕ್ಷಿಣ 24 ಪರಗಣಗಳು ಮತ್ತು ಜಾರ್‌ಗ್ರಾಮ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಅ.24 ಮತ್ತು 25 ರಂದು ಕೋಲ್ಕತ್ತಾ, ಹೌರಾ, ಹೂಗ್ಲಿ, ಉತ್ತರ 24 ಪರಗಣಗಳು, ಪುರುಲಿಯಾ ಮತ್ತು ಬಂಕುರಾ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.