Parliament Session | ಎನ್ಡಿಎ- ಇಂಡಿಯಾ ಜಗಳದಲ್ಲೇ ಮುಕ್ತಾಯಗೊಂಡ ಚಳಿಗಾಲದ ಅಧಿವೇಶನ
ಬಿ.ಆರ್.ಅಂಬೇಡ್ಕರ್ ಅವರ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನೀಡಿರುವ ಹೇಳಿಕೆ ಉಭಯ ಸದನದಲ್ಲಿ ಜೋರು ಗಲಾಟೆಗೆ ಕಾರಣವಾಯಿತು. ಏತನ್ಮಧ್ಯೆ, ಎರಡು ವಿಧೇಯಕಗಳು ಮಂಡನೆಯಾಗಿ ಅದು ಜಂಟಿ ಸದನ ಸದನ ಸಮಿತಿಗೆ ವರ್ಗಾವಣೆಯಾಗಿದೆ.;
'ಒಂದು ರಾಷ್ಟ್ರ ಒಂದು ಚುನಾವಣೆ' ವಿಧೇಯಕವೊಂದು ಜಂಟಿ ಸದನ ಸಮಿತಿಗೆ ಒಪ್ಪಿಸಿರುವುದು ಬಿಟ್ಟರೆ ಅಧಿವೇಶನ ಪೂರ್ತಿಯಾಗಿ ಜಗಳದಲ್ಲಿಯೇ ಮುಗಿದಿದೆ. ಹೀಗಾಗಿ ಅರ್ಥಪೂರ್ಣ ಚರ್ಚೆ ನಡೆಸದೇ ಜನಪ್ರತಿನಿಧಿಗಳೂ ತಮ್ಮ ಸಮಯವನ್ನು ವ್ಯರ್ಥ ಮಾಡಿದರು.
ಬಿ.ಆರ್.ಅಂಬೇಡ್ಕರ್ ವಿವಾದ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಪ್ರತಿಪಕ್ಷಗಳ ಸದಸ್ಯರು ಪ್ರತಿಭಟನೆ ನಡೆಸಿದರು. ಕೊನೇ ತನಕ ಇದೇ ಜಗಳ ಮುಂದುವರಿದ ಕಾರಣ ಸಂಸತ್ತಿನ ಉಭಯ ಸದನಗಳನ್ನು ಶುಕ್ರವಾರ (ಡಿಸೆಂಬರ್ 20) ಅನಿರ್ದಿಷ್ಟಾವಧಿಗೆ ಮುಂದೂಡಿಕೆ ಮಾಡಲಾಯಿತು. ಅಲ್ಲಿಗೆ ಚಳಿಗಾಲದ ಅಧಿವೇಶನ ಕೊನೆಗೊಂಡಿತು.
ಲೋಕಸಭಾ ಸ್ಪೀಕರ್ ಅವರ ಸಾಂಪ್ರದಾಯಿಕ ಚಹಾ ಕೂಟದಲ್ಲಿ ಪಾಲ್ಗೊಳ್ಳುವುದಕ್ಕೆ ಪ್ರತಿಪಕ್ಷಗಳು ಒಪ್ಪಲಿಲ್ಲ. ತಮ್ಮ ಸಂಸದರ ವಿರುದ್ಧ ಎಫ್ಐಆರ್ ದಾಖಲಾಗಿದೆ ಹಾಗೂ ಸದನದಲ್ಲಿ ಮಾತನಾಡಲು ತಮಗೆ ಅವಕಾಶ ಸಿಗದಿರುವಾಗ ಚಹಾ ಕೂಟದಲ್ಲಿ ಭಾಗವಹಿಸುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ವಿರೋಧ ಪಕ್ಷದ ನಾಯಕರು ಅಭಿಪ್ರಾಯಪಟ್ಟಿದ್ದಾರೆ.
ಬಿ.ಆರ್.ಅಂಬೇಡ್ಕರ್ ಅವರ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನೀಡಿರುವ ಹೇಳಿಕೆ ಉಭಯ ಸದನದಲ್ಲಿ ಜೋರು ಗಲಾಟೆಗೆ ಕಾರಣವಾಯಿತು. ಏತನ್ಮಧ್ಯೆ, ಎರಡು ವಿಧೇಯಕಗಳು ಮಂಡನೆಯಾಗಿ ಅದು ಜಂಟಿ ಸದನ ಸದನ ಸಮಿತಿಗೆ ವರ್ಗಾವಣೆಯಾಗಿದೆ.
ಶುಕ್ರವಾರ ಕಲಾಪ ಆರಂಭವಾಗುತ್ತಿದ್ದಂತೆ ವಿರೋಧ ಪಕ್ಷದ ಸದಸ್ಯರು ಅಂಬೇಡ್ಕರ್ ಪರ ಘೋಷಣೆಗಳನ್ನು ಕೂಗಲು ಆರಂಂಭಿಸಿದರು. ಗೃಹ ಸಚಿವ ಅಮಿತ್ ಶಾ ಅವರನ್ನು ತರಾಟೆಗೆ ತೆಗೆದುಕೊಂಡರು
ಜೆಪಿಸಿಯಲ್ಲಿ ಪ್ರಿಯಾಂಕಾ ಗಾಂಧಿ, ಅನುರಾಗ್ ಠಾಕೂರ್
ಲೋಕ ಸಭಾ ಸ್ಪೀಕರ್ ಓಂ ಬಿರ್ಲಾ ಅವರು ಸಂವಿಧಾನ (129 ನೇ ತಿದ್ದುಪಡಿ) ಮಸೂದೆ, 2024 ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳ (ತಿದ್ದುಪಡಿ) ಮಸೂದೆ, 2024 ಅನ್ನು ಲೋಕಸಭೆಯ 27 ಮತ್ತು ರಾಜ್ಯಸಭೆಯ 12 ಸದಸ್ಯರನ್ನು ಒಳಗೊಂಡ ಜಂಟಿ ಸಂಸದೀಯ ಸಮಿತಿಗೆ (ಜೆಪಿಸಿ) ಕಳುಹಿಸುವ ನಿರ್ಣಯ ತೆಗೆದುಕೊಂಡರು.
ಕಾಂಗ್ರೆಸ್ ಸಂಸದರಾದ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಮನೀಶ್ ತಿವಾರಿ ಮತ್ತು ತೃಣಮೂಲದ ಕಲ್ಯಾಣ್ ಬ್ಯಾನರ್ಜಿ ಮತ್ತು ಸಾಕೇತ್ ಗೋಖಲೆ ಸಮಿತಿಯ ವಿರೋಧ ಪಕ್ಷದ ಸಂಸದರಾದರೆ, ಮಾಜಿ ಕೇಂದ್ರ ಸಚಿವ ಅನುರಾಗ್ ಠಾಕೂರ್, ಸಂಬಿತ್ ಪಾತ್ರಾ ಮತ್ತು ಅನಿಲ್ ಬಲೂನಿ ಸರ್ಕಾರವನ್ನು ಪ್ರತಿನಿಧಿಸಲಿದ್ದಾರೆ.
ಗದ್ದಲದ ನಡುವೆ ಧ್ವನಿ ಮತದಿಂದ ನಿರ್ಣಯವನ್ನು ಅಂಗೀಕರಿಸಲಾಯಿತು. ನಂತರ ಲೋಕಸಭೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು. ಏಕಕಾಲದಲ್ಲಿ ಚುನಾವಣೆ ನಡೆಸುವ ಕುರಿತು ಸಂಸತ್ತಿನ ಜಂಟಿ ಸಮಿತಿಗೆ 12 ಸದಸ್ಯರನ್ನು ನಾಮನಿರ್ದೇಶನ ಮಾಡುವ ನಿರ್ಣಯವನ್ನು ಸದನವು ಅಂಗೀಕರಿಸಿದ ನಂತರ ರಾಜ್ಯಸಭೆಯನ್ನು ಶುಕ್ರವಾರ ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು.
ಇಂಡಿಯಾ- ಎನ್ಡಿಎ ಪ್ರತಿಭಟನೆ
ಅಂಬೇಡ್ಕರ್ ವಿಷಯದ ಬಗ್ಗೆ ಭುಗಿಲೆದ್ದ ವಿವಾದವು ಸಂಸತ್ತಿನ ಚಳಿಗಾಲದ ಅಧಿವೇಶನದ ಕೊನೆಯ ದಿನದವರೆಗೂ ಹರಡಿತ., ಇಂಡಿಯಾ ಬ್ಲಾಕ್ ಮತ್ತು ಎನ್ಡಿಎ ಸಂಸದರು ಪ್ರತ್ಯೇಕ ಪ್ರತಿಭಟನೆಗಳನ್ನು ನಡೆಸಿದರು.
ಬಿ.ಆರ್.ಅಂಬೇಡ್ಕರ್ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಗೃಹ ಸಚಿವ ಅಮಿತ್ ಶಾ ಕ್ಷಮೆಯಾಚಿಸಬೇಕು ಮತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ವಿರೋಧ ಪಕ್ಷದ ಸಂಸದರು ವಿಜಯ್ ಚೌಕ್ ನಿಂದ ಸಂಸತ್ತಿನವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದರು.
ಪ್ರೇರಣಾ ಸ್ಥಳದ ಗಾಂಧಿ ಪ್ರತಿಮೆ ಬಳಿ ಬಿಜೆಪಿ ಸಂಸದರು ಸಂಸತ್ ಭವನದ ಒಳಗೆ ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ನಿಷೇಧಿಸಿದ ಸ್ಪೀಕರ್
ರಾಜಕೀಯ ಪ್ರತಿಭಟನೆಗಳು ಅನಾರೋಗ್ಯಕರ ಪರಿಸ್ಥಿತಿಗೆ ತಿರುಗಿದ ನಂತರ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗುರುವಾರ ಸಂಸತ್ತಿನ ಯಾವುದೇ ದ್ವಾರಗಳಲ್ಲಿ ಸಂಸದರು ಮತ್ತು ರಾಜಕೀಯ ಪಕ್ಷಗಳು ಪ್ರತಿಭಟನೆ ನಡೆಸಬಾರದು ಎಂದು ಆದೇಶ ಹೊರಡಿಸಿದರು.
"ಸಂಸತ್ ಭವನದ ಬಿಲ್ಡಿಂಗ್ ಗೇಟ್ಗಳಲ್ಲಿ ಯಾವುದೇ ರಾಜಕೀಯ ಪಕ್ಷ, ಸಂಸತ್ ಸದಸ್ಯರು ಅಥವಾ ಸದಸ್ಯರ ಗುಂಪುಗಳು ಯಾವುದೇ ಧರಣಿ ನಡೆಸಬಾರದು ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ" ಎಂದು ಮೂಲಗಳು ಖಾತರಿಪಡಿಸಿದವು.
ಗುರುವಾರ ಪ್ರತಿಭಟನೆ ನಡೆಸುವ ವೇಳೆ ಇಬ್ಬರು ಸಂಸದರು ಗಾಯಗೊಂಡಿದ್ದರು. ಮಹಿಳಾ ಸಂಸದರೊಬ್ಬರು ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ ಘಟನೆಯೂ ನಡೆಯಿತು.
ಬಿಜೆಪಿ ಸಂಸದರು, ತಮ್ಮ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಎಲ್ಒಪಿ ರಾಹುಲ್ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕೂಡ ಪೊಲೀಸರಿಗೆ ದೂರು ನೀಡಿದೆ.