ಸಾಹಿತಿ ಪಿ. ವಿ. ನಾರಾಯಣ ನಿಧನ

ವಿಜಯಾ ಕಾಲೇಜ್, ಬೆಂಗಳೂರಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ ನಾರಾಯಣ ಅವರು 45ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ.;

Update: 2025-04-03 04:59 GMT

ಕನ್ನಡ ಸಾಹಿತಿ, ವಿದ್ವಾಂಸ ಪಿ. ವಿ. ನಾರಾಯಣ (82) ಅವರು ಇಂದು (ಗುರುವಾರ, ಏಪ್ರಿಲ್ 3, 2025) ಬೆಳಿಗ್ಗೆ ವಯೋಸಹಜ ಅನಾರೋಗ್ಯದಿಂದ ನಿಧನರಾದರು. ಜಯನಗರದ 8ನೇ ಬ್ಲಾಕ್​ನ ಹೇಮಂತ ಅರಿಷ್ಠ ಅಪಾರ್ಟ್ಮೆಂಟ್​​ನಲ್ಲಿ ಅವರು ಇಹಲೋಕ ತ್ಯಜಿಸಿದ್ದು ಅಲ್ಲಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3:00 ಗಂಟೆಗೆ ಬನಶಂಕರಿ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.

ಪಿ. ವಿ. ನಾರಾಯಣ ಅವರು 1942ರ ಡಿಸೆಂಬರ್ 18ರಂದು ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನಲ್ಲಿ ಜನಿಸಿದರು. ಅವರು ಮೈಸೂರು ವಿಶ್ವವಿದ್ಯಾಲಯದಿಂದ ಕನ್ನಡದಲ್ಲಿ ಸ್ನಾತಕೋತ್ತರ ಪದವಿ, ಕರ್ನಾಟಕ ವಿಶ್ವವಿದ್ಯಾಲಯದಿಂದ ಇಂಗ್ಲಿಷ್​​ನಲ್ಲಿ ಸ್ನಾತಕೋತ್ತರ ಪದವಿ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದಿಂದ "ವಚನ ಸಾಹಿತ್ಯ: ಒಂದು ಸಾಂಸ್ಕೃತಿಕ ಅಧ್ಯಯನ" ಪ್ರಬಂಧಕ್ಕೆ ಪಿಎಚ್.ಡಿ. ಪಡೆದಿದ್ದರು.

ವಿಜಯಾ ಕಾಲೇಜ್, ಬೆಂಗಳೂರಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ ನಾರಾಯಣ ಅವರು 45ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ವಿಮರ್ಶೆ/ಸಂಶೋಧನೆ-ಬಳ್ಳಿಗಾವೆ, ಕಾಯಕತತ್ವ, ಚಂಪೂಕವಿಗಳು, ವಚನ ಚಳವಳಿ, ವಚನ ವ್ಯಾಸಂಗ, ಪದ್ಮಿನೀ ಪರಿಣಯ, ಅನುವಾದ-ಮದುವೆ ಮತ್ತು ನೀತಿ, ಹನ್ನೆರಡನೇ ರಾತ್ರಿ, ಅಶ್ವತ್ಥಾಮನ್, ಬುವಿಯ ಬಸಿರಿಗೆ ಪಯಣ, ಪಂಪ ರಾಮಾಯಣ, ಅಂತರ, ವಿಕಾಸ, ಶೋಧನೆ ನಿರ್ಧಾರ, ಧರ್ಮಕಾರಣ ಸೇರಿ ಒಟ್ಟು 45ಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿದ್ದಾರೆ. ಬಿ.ಎಂ.ಶ್ರೀ. ಪ್ರತಿಷ್ಠಾನದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

ಅವರ ವಚನ ವ್ಯಾಸಂಗ ಕೃತಿಗೆ ಇಳಕಲ್ಲಿನ ಶ್ರೀವಿಜಯ ಮಹಂತೇಶ ಮಠ ಪುರಸ್ಕಾರ, ಸಮಾಜದ ಮೇಲೆ ವಿಜ್ಞಾನದ ಪ್ರಭಾವ ಕೃತಿಗೆ ರಾಜ್ಯ ಸಾಹಿತ್ಯ ಅಕಾಡಮಿ ಬಹುಮಾನ ಮತ್ತು ಆರ್ಯಭಟ ಪ್ರಶಸ್ತಿ ಸೇರಿ ಹಲವಾರು ಪ್ರಶಸ್ತಿಗಳು ಲಭಿಸಿವೆ. 

Tags:    

Similar News