ಕರ್ನಾಟಕದಲ್ಲಿ ಪೆಟ್ರೋಲ್‌ - ಡೀಸೆಲ್‌ ಬೆಲೆ ಹೆಚ್ಚಳ: ವಿರೋಧ ಮತ್ತು‌ ಸಮರ್ಥನೆ

ರಾಜ್ಯ ಸರ್ಕಾರವು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡಿರುವುದಕ್ಕೆ ವಿರೋಧ ಪಕ್ಷಗಳು ಹಾಗೂ ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗಿದೆ. ಕರ್ನಾಟಕದಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 3 ರೂಪಾಯಿ ಹಾಗೂ ಡೀಸೆಲ್ಗೆ 3.50 ಪೈಸೆ ಹೆಚ್ಚಳ ಮಾಡಲಾಗಿದೆ. ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ವಿರೋಧಿಸಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನೇತೃತ್ವದಲ್ಲಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ಬಿಜೆಪಿಯಿಂದ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಬಿಜೆಪಿಯ ಪ್ರಮುಖ ನಾಯಕರು ಹಾಗೂ ನೂರಾರು ಜನ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು. ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಹೆಚ್ಚಳ ಮಾಡಿರುವುದನ್ನು ವಿರೋಧಿಸಿದರು. ಕೂಡಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸಬೇಕು ಎಂದು ಆಗ್ರಹಿಸಿದರು. ಇನ್ನು ಕರ್ನಾಟಕದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವುದಕ್ಕೆ ಸಾರ್ವಜನಿಕರಿಂದಲೂ ವಿರೋಧ ವ್ಯಕ್ತವಾಗಿದೆ.;

By :  Keerthik
Update: 2024-06-17 15:50 GMT

ರಾಜ್ಯ ಸರ್ಕಾರವು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡಿರುವುದಕ್ಕೆ ವಿರೋಧ ಪಕ್ಷಗಳು ಹಾಗೂ ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗಿದೆ. ಕರ್ನಾಟಕದಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 3 ರೂಪಾಯಿ ಹಾಗೂ ಡೀಸೆಲ್ಗೆ 3.50 ಪೈಸೆ ಹೆಚ್ಚಳ ಮಾಡಲಾಗಿದೆ. ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ವಿರೋಧಿಸಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನೇತೃತ್ವದಲ್ಲಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ಬಿಜೆಪಿಯಿಂದ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ಬಿಜೆಪಿಯ ಪ್ರಮುಖ ನಾಯಕರು ಹಾಗೂ ನೂರಾರು ಜನ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು. ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಹೆಚ್ಚಳ ಮಾಡಿರುವುದನ್ನು ವಿರೋಧಿಸಿದರು. ಕೂಡಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸಬೇಕು ಎಂದು ಆಗ್ರಹಿಸಿದರು.

ಇನ್ನು ಕರ್ನಾಟಕದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವುದಕ್ಕೆ ಸಾರ್ವಜನಿಕರಿಂದಲೂ ವಿರೋಧ ವ್ಯಕ್ತವಾಗಿದೆ.

Tags:    

Similar News