ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಕೇಂದ್ರಕ್ಕೆ ಮನವಿ: ಬಿಸಿಯೂಟ, ಆಶಾ ನೌಕರರ ಸಮಸ್ಯೆ ಬಗೆಹರಿಯುತ್ತಾ?
ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಅಂಗನವಾಡಿ, ಅಕ್ಷರ ದಾಸೋಹ ಮತ್ತು ಆಶಾ ಕಾರ್ಯಕರ್ತೆಯರ ನಿಯೋಗವು ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದೆ. ಈ ನಿಯೋಗದಲ್ಲಿದ್ದ ಬಿಸಿಯೂಟ ಮತ್ತು ಆಶಾ ನೌಕರರ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಮಾಲಿನಿ ಮೇಸ್ತ ಅವರು 'ದಿ ಫೆಡರಲ್ ಕರ್ನಾಟಕ'ಕ್ಕೆ ನೀಡಿದ ವಿಶೇಷ ಸಂದರ್ಶನ ಇಲ್ಲಿದೆ. ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಅನ್ನಪೂರ್ಣ ದೇವಿ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗಿನ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು? ವೇತನ ಹೆಚ್ಚಳ, ವಿಮಾ ಸೌಲಭ್ಯ ಹಾಗೂ ಚುನಾವಣಾ ಕರ್ತವ್ಯದ ಕುರಿತು ಸಿಕ್ಕ ಭರವಸೆಗಳೇನು? ಮುಂಬರುವ ಬಜೆಟ್‌ನಲ್ಲಿ ಬೇಡಿಕೆಗಳು ಈಡೇರದಿದ್ದರೆ ಮುಂದಿನ ನಡೆ ಏನು? ಸಂಪೂರ್ಣ ವಿವರಗಳನ್ನು ಈ ವಿಡಿಯೋದಲ್ಲಿ ವೀಕ್ಷಿಸಿ.
By : The Federal
Update: 2025-12-05 13:38 GMT