ಕೆಂಪೇಗೌಡ ಜಯಂತಿಯಲ್ಲಿ ʼದೇವೇಗೌಡರʼ ವಿವಾದ: ಕಾರಣವೇನು ?
ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಆಚರಣೆ ಇದೀಗ ವಿವಾದ ಸ್ವರೂಪ ಪಡೆದುಕೊಂಡಿದೆ. ರಾಜ್ಯ ಸರ್ಕಾರದಿಂದ ಗುರುವಾರ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಆಚರಣೆ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಆಹ್ವಾನ ನೀಡದಿರುವುದು ವಿವಾದ ಸ್ವರೂಪ ಪಡೆದುಕೊಂಡಿದೆ. ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣವಿರಲಿ, ಜಯಂತಿಯಿರಲಿ, ಕನ್ನಡಿಗರ ಮೊದಲ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಅನಾದರ ತೋರುವ ಪ್ರಕ್ರಿಯೆ ಹಿಂದಿನ ಬಿಜೆಪಿ ಸರ್ಕಾರ ಮತ್ತು ಈಗಿನ ಕಾಂಗ್ರೆಸ್ ಸರ್ಕಾರದಿಂದ ನಡೆದಿದೆ. ಒಕ್ಕಲಿಗರ ʼಐಕಾನ್ʼ ಆಗಿರುವ ಕೆಂಪೇಗೌಡ ಮತ್ತು ಒಕ್ಕಲಿಗರ ಪರಮೋಚ್ಛ ನಾಯಕ ಎಂದೇ ಕರೆಯಲಾಗುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ʼರಾಜಕೀಯ ಕೆಸೆರೆರಚಾಟʼ ನಡೆಸುತ್ತಿರುವ ಆರೋಪ ಕೇಳಿಬಂದಿದೆ.
By : Keerthik
Update: 2024-06-28 13:19 GMT