ಖ್ಯಾತ ನಿರೂಪಕಿ, ನಟಿ ಅಪರ್ಣಾ ನಿಧನ
ಕನ್ನಡ ಕಿರುತೆರೆಯ ಖ್ಯಾತ ನಿರೂಪಕಿ ಅಪರ್ಣಾ(58) ಅವರು ಗುರುವಾರ ರಾತ್ರಿ ನಿಧನರಾಗಿದ್ದಾರೆ. ಕಳೆದ ಎರಡು ವರ್ಷಗಳಿಂದ ಶ್ವಾಸಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅಪರ್ಣಾ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಅಪರ್ಣಾ ಅವರ ಪತಿ ನಾಗರಾಜ ವಸ್ತಾರೆ ಅವರು ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.;
By : Keerthik
Update: 2024-07-12 10:16 GMT