High alert in Bangalore | Bomb blast | ಬೆಂಗಳೂರಿನಲ್ಲಿ ಹೈ ಅಲರ್ಟ್ | Bangalore Police Commissioner
ಶುಕ್ರವಾರ ನಗರದಲ್ಲಿ ಬಾಂಬ್ ಸ್ಫೋಟ ನಡೆದಿ ಹಿನ್ನೆಲೆಯಲ್ಲಿ ಹಾಗೂ ವಾರಾಂತ್ಯವೂ ಆಗಿರುವುದರಿಂದ ಬೆಂಗಳೂರಿನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಶುಕ್ರವಾರ ನಗರದ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ನಡೆದ ಹಿನ್ನೆಲೆಯಲ್ಲಿ ಪೊಲೀಸರು ನಗರದಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ. ಮುಖ್ಯವಾಗಿ ನಗರದ ಜನನಿಬಿಡ ಪ್ರದೇಶ, ಮೆಜೆಸ್ಟಿಕ್, ವಿವಾನ ನಿಲ್ದಾಣ ಹಾಗೂ ಮಾಲ್‌ಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಭಾರತೀಯ ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ನಿಗಾ ವಹಿಸಿದ್ದು, ಪ್ರತಿ ಪ್ರಯಾಣಿಕರ ಮೇಲೆ ಹೆಚ್ಚಿನ ನಿಗಾ ವಹಿಸಿದೆ.;
By : Keerthik
Update: 2024-03-04 06:38 GMT