ಸಿದ್ದರಾಮಯ್ಯ ಸಿಎಂ ಸ್ಥಾನದಿಂದ iಇಳಿದರೆ ಕಾಂಗ್ರೆಸ್ ಸರ್ವನಾಶ, ಸ್ವಾಮೀಜಿಗಳ ಜತೆಗೂಡಿ ಬೀದಿಗಿಳಿಯುತ್ತೇವೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬದಲಾವಣೆ ಚರ್ಚೆ ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದೆ. ಈ ಚರ್ಚೆಗಳ ಬೆನ್ನಲ್ಲೇ ಇದೇ ಮೊದಲ ಬಾರಿಗೆ ಕರ್ನಾಟಕ ಪ್ರದೇಶ ಕುರುಬರ ಸಂಘ ಸಿಡಿದೆದ್ದಿದೆ. ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಬದಲಿಸಿದರೆ ರಾಜ್ಯದಲ್ಲಿ ಕ್ರಾಂತಿಯಾಗಲಿದೆ, ಬೆಂಕಿ ಬೀಳಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಎಂ.ವಿ. ಸೋಮಶೇಖರ್ ನೇರವಾಗಿ ಎಚ್ಚರಿಕೆ ನೀಡಿದ್ದಾರೆ. ದ ಫೆಡರಲ್ ಕರ್ನಾಟಕಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, ಒಂದು ವೇಳೆ ಹೈಕಮಾಂಡ್ ಬದಲಾವಣೆ ತೀರ್ಮಾನ ಕೈಗೊಂಡರೆ, ಅಹಿಂದ ಸ್ವಾಮೀಜಿಗಳ ಜೊತೆಗೂಡಿ ಬೀದಿಗಿಳಿದು ಹೋರಾಟ ಮಾಡುವುದಾಗಿ ಗುಡುಗಿದ್ದಾರೆ. ಈ ಸ್ಫೋಟಕ ಸಂದರ್ಶನದ ಸಂಪೂರ್ಣ ವಿವರಗಳಿಗಾಗಿ ಈ ವಿಡಿಯೋವನ್ನು ಪೂರ್ತಿಯಾಗಿ ನೋಡಿ.

Update: 2025-11-11 04:46 GMT


Tags:    

Similar News