Krishna ByreGowda vs Nirmala Sitharaman ನಿರ್ಮಲಾ ಸೀತಾರಾಮನ್‌ಗೆ ಕೃಷ್ಣ ಬೈರೇಗೌಡ ಸವಾಲು | Tax devolution
ಕರ್ನಾಟಕಕ್ಕೆ ಯಾವುದೇ ಅನುದಾನ ಬಾಕಿ ಉಳಿಸಿಕೊಂಡಿಲ್ಲ ಎಂಬ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಹೇಳಿಕೆ ಸತ್ಯಕ್ಕೆ ದೂರವಾದುದು. ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಕ್ಕೆ 11,495 ಕೋಟಿ ರು. ವಿಶೇಷ ಅನುದಾನ ನೀಡಬೇಕಿತ್ತು. ಆದರೆ ಕೇಂದ್ರ ಸರ್ಕಾರ ಅದನ್ನೂ ಬಾಕಿ ಉಳಿಸಿಕೊಂಡಿದೆ. ಈ ಬಗ್ಗೆ ಅವರು ಯಾವಾಗ ಬಂದರೂ ಚರ್ಚೆಗೆ ನಾವು ಸಿದ್ಧ ಎಂದು ಸಚಿವ ಕೃಷ್ಣ ಬೈರೇಗೌಡ ಸವಾಲು ಹಾಕಿದ್ದಾರೆ. ತೆರಿಗೆ ಅನ್ಯಾಯದ ಬಗ್ಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದರೆ, ಅನ್ಯಾಯವೇ ಸುಳ್ಳು ಎಂದು ಬಿಜೆಪಿಗರು ಹೇಳುತ್ತಾರೆ. ಬಿಎಸ್ ವೈ, ಬೊಮ್ಮಾಯಿ ಕೂಡ ಸಿಎಂ ಆಗಿದ್ದಾಗ ಪತ್ರ ಬರೆದಿದ್ದರು. ಹಾಗಾದರೆ ಅವರೂ ಸುಳ್ಳು ಹೇಳಿದ್ದರಾ? ಎಂದು ಸಚಿವ ಕೃಷ್ಣ ಬೈರೇಗೌಡ ಪ್ರಶ್ನಿಸಿದ್ದಾರೆ.;
By : Keerthik
Update: 2024-03-27 05:39 GMT