LIVE | ಮೆಕ್ಕೆಜೋಳ, ಭತ್ತಕ್ಕೆ ಬೆಲೆ ಕೊಡಿ: ದಾವಣಗೆರೆಯಲ್ಲಿ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ
ದಾವಣಗೆರೆಯಲ್ಲಿ ರೈತರ ಪರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆದಿದೆ. ಮೆಕ್ಕೆಜೋಳ ಹಾಗೂ ಭತ್ತಕ್ಕೆ ಸರಿಯಾದ ಬೆಂಬಲ ಬೆಲೆ ನೀಡುವುದು ಮತ್ತು ಖರೀದಿ ಕೇಂದ್ರಗಳನ್ನು ತಕ್ಷಣವೇ ಆರಂಭಿಸುವಂತೆ ಆಗ್ರಹಿಸಿ ಈ ಶಕ್ತಿ ಪ್ರದರ್ಶನ ನಡೆಸಲಾಗಿದೆ. ರೈತರ ಸಂಕಷ್ಟವನ್ನು ನಿರ್ಲಕ್ಷಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರೈತರ ಬೆಳೆಗೆ ನ್ಯಾಯಬೆಲೆ ಸಿಗದೆ ಅವರು ತೀವ್ರ ಸಂಕಷ್ಟ ಅನುಭವಿಸುತ್ತಿರುವಾಗ ಸರ್ಕಾರ ತಾರಯಿಸುತ್ತಿದೆ ಎಂದು ಆರೋಪಿಸಿದ್ದಾರೆ. ಈ ಪ್ರತಿಭಟನೆಯಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ರೈತರು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು.
By : The Federal
Update: 2025-11-25 11:52 GMT