ಬಿಹಾರದ ದಾಖಲೆ ಮುರಿಯುತ್ತೇವೆ: ಕರ್ನಾಟಕದ ರಾಜಕೀಯದ ಬಗ್ಗೆ ಎಚ್.ಡಿ. ಕುಮಾರಸ್ವಾಮಿ ಭವಿಷ್ಯ
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಯು ಮೈತ್ರಿಕೂಟದ ಐತಿಹಾಸಿಕ ಗೆಲುವಿನ ಬೆನ್ನಲ್ಲೇ, ಕರ್ನಾಟಕದ ರಾಜಕೀಯ ವಲಯದಲ್ಲೂ ಚರ್ಚೆಗಳು ಗರಿಗೆದರಿವೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ, ರಾಜ್ಯ ರಾಜಕಾರಣದ ಬಗ್ಗೆ ಮಹತ್ವದ ಭವಿಷ್ಯ ನುಡಿದಿದ್ದಾರೆ. ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟದ ಒಗ್ಗಟ್ಟಿನ ಪ್ರದರ್ಶನವನ್ನು ಶ್ಲಾಘಿಸಿದ ಅವರು, "ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟವು ಬಿಹಾರದ ಗೆಲುವಿನ ದಾಖಲೆಯನ್ನು ಮುರಿಯಲಿದೆ. ನಮ್ಮ ಮೈತ್ರಿ ಅದಕ್ಕಿಂತಲೂ ಬಲಿಷ್ಠವಾಗಿದ್ದು, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಿ ಅಧಿಕಾರ ಹಿಡಿಯುವುದು ನಿಶ್ಚಿತ" ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
By : The Federal
Update: 2025-11-14 13:22 GMT