LIVE | ಶಾಂತಿ ಸಭೆಯಲ್ಲಿ RSSಗೆ ಭೀಮ್ ಆರ್ಮಿ ಹಾಕಿದ ಷರತ್ತುಗಳೇನು? | Chittapur RSS March
ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ (RSS) ನವೆಂಬರ್ 2 ರಂದು ನಡೆಸಲು ಉದ್ದೇಶಿಸಿರುವ ಪಥ ಸಂಚಲನಕ್ಕೆ ಸಂಬಂಧಿಸಿದಂತೆ, ಹೈಕೋರ್ಟ್ ನಿರ್ದೇಶನದಂತೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು (ಅ.28) ಶಾಂತಿ ಸಭೆ ನಡೆಯಿತು. ಸಭೆಯಲ್ಲಿ ಆರ್‌ಎಸ್‌ಎಸ್, ಭೀಮ್ ಆರ್ಮಿ, ದಲಿತ ಪ್ಯಾಂಥರ್ಸ್ ಸೇರಿದಂತೆ ಹಲವು ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು. ಸಭೆಯಲ್ಲಿ, ಆರ್‌ಎಸ್‌ಎಸ್ ಪಥ ಸಂಚಲನಕ್ಕೆ ಅನುಮತಿ ನೀಡಬೇಕಾದರೆ ಕೆಲವು ಷರತ್ತುಗಳನ್ನು ವಿಧಿಸಬೇಕು ಎಂದು ಭೀಮ್ ಆರ್ಮಿ ಪಟ್ಟು ಹಿಡಿದಿದೆ. "ಪಥ ಸಂಚಲನದ ವೇಳೆ ಯಾವುದೇ ಪ್ರಚೋದನಕಾರಿ ಘೋಷಣೆಗಳನ್ನು ಕೂಗಬಾರದು, ಮೆರವಣಿಗೆಯಲ್ಲಿ ಯಾವುದೇ ರೀತಿಯ ಆಯುಧಗಳನ್ನು ಪ್ರದರ್ಶಿಸಬಾರದು ಮತ್ತು ಸಂವಿಧಾನ ವಿರೋಧಿ ಚಟುವಟಿಕೆಗಳಲ್ಲಿ ತೊಡಗಬಾರದು" ಎಂಬ ಪ್ರಮುಖ ಷರತ್ತುಗಳನ್ನು ಭೀಮ್ ಆರ್ಮಿ ಮುಂದಿಟ್ಟಿದೆ ಎಂದು ತಿಳಿದುಬಂದಿದೆ.
By : The Federal
Update: 2025-10-28 11:33 GMT