ಬೆಂಗಳೂರಿನಲ್ಲಿ 1 ಸಾವಿರಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣ ದೃಢ
ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನ ಎಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ. ಬೆಂಗಳೂರಿನಲ್ಲಿ ಕಾಲರಾದ ನಂತರ ಇದೀಗ ಡೆಂಗ್ಯೂ ಜ್ವರದ ಪ್ರಕರಣಗಳು ಹೆಚ್ಚಾಗುತ್ತಿವೆ. ಮಳೆಗಾಲ ಚುರುಕು ಪಡೆದುಕೊಂಡ ಬೆನ್ನಲ್ಲೇ ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರದ ಪ್ರಕರಣಗಳು ಹೆಚ್ಚುತ್ತಿದ್ದು, ಜನ ಮುಂಜಾಗ್ರತೆ ವಹಿಸುವಂತೆ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ ಮನವಿ ಮಾಡಿದೆ. ಜನವರಿ 1ರಿಂದ ಜೂನ್ 20ರ ವರೆಗಿನ ಅವಧಿಯಲ್ಲಿ ಬೆಂಗಳೂರಿನಲ್ಲಿ 1046 ಡೆಂಗ್ಯೂ ಪ್ರಕರಣಗಳು ದೃಢಪಟ್ಟಿವೆ. ಡೆಂಗ್ಯೂ ಜ್ವರವು ವೈರಾಣುವಿನಿಂದ ಹರಡುವ ಮಾರಕ ಕಾಯಿಲೆಯಾಗಿದ್ದು, ಸೋಂಕಿತ ಈಡಿಸ್ ಸೊಳ್ಳೆ ಕಚ್ಚುವಿಕೆಯಿಂದ ಒಬ್ಬರಿಂದ ಮತ್ತೊಬ್ಬರಿಗೆ ಈ ಡೆಂಗ್ಯೂ ಹರಡುತ್ತದೆ.;
By : Keerthik
Update: 2024-06-26 11:55 GMT