ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಬಗ್ಗೆ ಸಿದ್ಧತೆ ನಡೆಯುತ್ತಿದೆ ಎಂದ ಕಾರ್ಮಿಕ ಸಚಿವ ಸಂತೋಷ್ ಲಾಡ್

ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ರಾಜ್ಯದ ಕಾರ್ಮಿಕ ವಲಯಕ್ಕೆ ಸಂಬಂಧಿಸಿದಂತೆ ಎರಡು ಮಹತ್ವದ ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಉದ್ಯೋಗಸ್ಥ ಮಹಿಳೆಯರ ಆರೋಗ್ಯ ಮತ್ತು ಕ್ಷೇಮದ ದೃಷ್ಟಿಯಿಂದ ಸರ್ಕಾರವು ಐತಿಹಾಸಿಕ ಹೆಜ್ಜೆಯಿಟ್ಟಿದ್ದು, ಮಹಿಳೆಯರಿಗೆ ಋತುಚಕ್ರದ ರಜೆ ಕೊಡಲು ಕ್ಯಾಬಿನೆಟ್​ ಒಪ್ಪಿಗೆ ನೀಡಿದೆ ಎಂದು ತಿಳಿಸಿದ್ದಾರೆ. ಜೊತೆಗೆ, ಹಲವು ದಶಕಗಳಿಂದ ನನೆಗುದಿಗೆ ಬಿದ್ದಿದ್ದ ಸರೋಜಿನಿ ಮಹಿಷಿ ವರದಿಯ ಆಶಯದಂತೆ, ಖಾಸಗಿ ವಲಯದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಕುರಿತು ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿದ್ದು, ಈ ನಿಟ್ಟಿನಲ್ಲಿ ಸಿದ್ಧತೆಗಳು ನಡೆಯುತ್ತಿವೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

Update: 2025-10-09 09:56 GMT


Tags:    

Similar News