ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಸಾಲುಮರದ ತಿಮ್ಮಕ್ಕ ನಿಧನ

ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ(114) ನಿಧನರಾಗಿದ್ದಾರೆ. ವಯೋ ಸಹಜ ಕಾರಣಗಳಿಂದ ಬಳಲುತ್ತಿದ್ದ ಅವರು ಶುಕ್ರವಾರ ಬೆಂಗಳೂರಿನ ಜಯನಗರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮಕ್ಕಳಿಲ್ಲದ ಸಾಲು ಮರದ ತಿಮ್ಮಕ್ಕ ಅವರು ಮರಗಿಡಗಳನ್ನೇ ಮಕ್ಕಳಂತೆ ಸಲಹಿ ವೃಕ್ಷಮಾತೆ ಎನಿಸಿಕೊಂಡಿದ್ದರು. ರಸ್ತೆಯ ಬದಿಯಲ್ಲಿ ತಿಮ್ಮಕ್ಕ ನೆಟ್ಟಿರುವ ಸಾಲು ಆಲದ ಮರಗಳು ಈಗಲೂ ದಾರಿ ಹೋಕರಿಗೆ ತಂಗಾಳಿ ಒದಗಿಸುತ್ತಿವೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದ್ದರು.

Update: 2025-11-14 13:21 GMT


Tags:    

Similar News