Loksabha Election 2024 | ಜೆಡಿಎಸ್ ಒಂದೇ ಒಂದು ಕ್ಷೇತ್ರವನ್ನೂ ಗೆಲ್ಲುವುದಿಲ್ಲ: ಡಿ.ಕೆ ಶಿವಕುಮಾರ್

ಜೆಡಿಎಸ್‌ ಈ ಬಾರಿ ಯಾವುದೇ ಕ್ಷೇತ್ರದಲ್ಲೂ ಗೆಲುವು ಸಾಧಿಸುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಹೇಳಿದ್ದಾರೆ. ನಾಲ್ಕು ಬಿಡಿ, ಒಂದು ಸ್ಥಾನವೂ ಸಿಗುವುದಿಲ್ಲ ಎಂದಿದ್ದಾರೆ.;

Update: 2024-04-11 07:48 GMT
ಡಿ.ಕೆ ಶಿವಕುಮಾರ್‌

ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಒಂದೇ ಒಂದು ಸ್ಥಾನವಲ್ಲೂ ಗೆಲ್ಲುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಭೇಟಿ ನೀಡಿ, ಲೋಕಸಭೆ ಚುನಾವಣೆಯ ಬಗ್ಗೆ ಚರ್ಚೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸುತ್ತಿರುವ ಮೂರು ಕ್ಷೇತ್ರಗಳಲ್ಲೂ ಸೋಲಲಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಮಾಜಿ ಪ್ರಧಾನಿ ದೇವೇಗೌಡರ ಅಳಿಯ ಡಾ. ಸಿಎನ್ ಮಂಜುನಾಥ್ ಅವರು ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಜೆಡಿಎಸ್ ಮತ್ತು ದೇವೇಗೌಡ ಅವರು ನಾಲ್ಕು ಸ್ಥಾನಗಳ ಬಗ್ಗೆ ಮಾತನಾಡುತ್ತಿದ್ದಾರೆ. ಜೆಡಿಎಸ್‌ನ ವರು ಒಂದೇ ಒಂದು ಸ್ಥಾನವನ್ನು ಗೆಲ್ಲುವುದಿಲ್ಲ ಎಂದು ಹೇಳಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಕರ್ನಾಟಕದಲ್ಲಿ ಯಾವ ರೀತಿ ಚುನಾವಣಾ ಸಿದ್ಧತೆ ನಡೆದಿದೆ ಎನ್ನುವ ಬಗ್ಗೆ ವರದಿ ಸಲ್ಲಿಸಿದ್ದೇನೆ. ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರು ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಏ.12 ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಆ ಸಂದರ್ಭದಲ್ಲಿ ಹಮ್ಮಿಕೊಂಡಿರುವ ರ್ಯಾಲಿಯಲ್ಲಿ ಖರ್ಗೆ ಅವರು ಭಾಗವಹಿಸಲಿದ್ದಾರೆ. ಅಲ್ಲದೇ ರಾಜ್ಯದ ಕೆಲವು ಭಾಗಗಳಲ್ಲೂ ಪ್ರಚಾರ ನಡೆಸಲಿದ್ದಾರೆ ಎಂದು ಡಿ ಕೆ ಶಿವಕುಮಾರ್‌ ಮಾಹಿತಿ ನೀಡಿದ್ದಾರೆ.

Tags:    

Similar News