‌Loksabha Election 2024 | ಏ.14ಕ್ಕೆ ರಾಜ್ಯಕ್ಕೆ ಬರಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ

ಲೋಕಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ರಾಜ್ಯಕ್ಕೆ ಬರಲಿದ್ದಾರೆ. ಇದೇ 14ರಂದು ಮೋದಿ ಭೇಟಿ ನೀಡಲಿದ್ದಾರೆ.;

Update: 2024-04-08 07:56 GMT
ಪ್ರಧಾನಿ ನರೇಂದ್ರ ಮೋದಿ ರೋಡ್‌ ಶೋ

ಲೋಕಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ಧತೆ ನಡೆಸುತ್ತಿದ್ದು, ಕರ್ನಾಟಕದಲ್ಲೂ ಪ್ರಚಾರ ಚುರುಕುಗೊಳಿಸಿದೆ. ಏಪ್ರಿಲ್ 14ರಂದು ಪ್ರಧಾನಿ ನರೇಂದ್ರ ಮೋದಿ ಅವರು ಚಿಕ್ಕಬಳ್ಳಾಪುರ, ಬೆಂಗಳೂರು ಉತ್ತರ ಮತ್ತು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳಲ್ಲಿ ನಡೆಯಲಿರುವ ಚುನಾವಣಾ ಪ್ರಚಾರ ಸಭೆ ಮತ್ತು ರೋಡ್ ಶೋಗಳಲ್ಲಿ ಭಾಗವಹಿಸಲಿದ್ದಾರೆ.

ಅದೇ ದಿನ ಚಿಕ್ಕಬಳ್ಳಾಪುರದಲ್ಲಿ ನಡೆಯುವ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲಿದ್ದು, ಇದಾದ ನಂತರ ರಾಮನಗರ- ಚನ್ನಪಟ್ಟಣದಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಲಿದ್ದಾರೆ. ಏಪ್ರಿಲ್ 14ರ ಸಂಜೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ 10 ಕಿ.ಮೀ.ಗಳಷ್ಟು ದೂರ ರೋಡ್ ಶೋ ನಡೆಸುವ ಸಾಧ್ಯತೆಯೂ ಇದೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಇನ್ನು ನಾಲ್ಕೈದು ಬಾರಿ ಕರ್ನಾಟಕಕ್ಕೆ ಬರಲಿದ್ದಾರೆ. ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದ್ದಾರೆ.

Tags:    

Similar News