ಲೋಕಸಭೆ ಚುನಾವಣೆಯ ಫಲಿತಾಂಶಕ್ಕೆ ಕ್ಷಣ ಗಣನೆ ಆರಂಭವಾಗಿದ್ದು, ರಾಜ್ಯದ 28 ಕ್ಷೇತ್ರಗಳ ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಇಂದು ನಿರ್ಧಾರವಾಗಲಿದೆ. ಇಂದು ಬೆಳಿಗ್ಗೆ 8 ರಿಂದಲೇ ಮತ ಎಣಿಕೆ ಆರಂಭವಾಗಲಿದೆ. ಮತ ಎಣಿಕೆ ಕಾರ್ಯಕ್ಕಾಗಿ ಚುನಾವಣಾ ಆಯೋಗ ವ್ಯಾಪಕ ತಯಾರಿ ಮಾಡಿಕೊಂಡಿದ್ದು, ಆಯಾ ಲೋಕಸಭಾ ಕ್ಷೇತ್ರಗಳ ಜಿಲ್ಲಾ ಕೇಂದ್ರಗಳಲ್ಲಿ ಮತಪೆಟ್ಟಿಗೆಗಳನ್ನು ಇಟ್ಟಿರುವ ಮತ ಎಣಿಕೆ ಕೇಂದ್ರಗಳಲ್ಲಿ ಬೆಳಿಗ್ಗೆ 8 ರಿಂದಲೇ ಮತ ಎಣಿಕೆ ಆರಂಭವಾಗಲಿದೆ. ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠರ ನೇತೃತ್ವದಲ್ಲಿ ಮತ ಎಣಿಕೆ ಸುಸೂತ್ರವಾಗಿ ನಡೆಯಲು ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ವ್ಯಾಪಕ ಬಂದೋಬಸ್ತಿನ ಏರ್ಪಾಡು ಕೂಡ ಆಗಿದೆ.