ರೇಣುಕಾಸ್ವಾಮಿ ಕೊಲೆ ಪ್ರಕರಣ; ದರ್ಶನ್, ಪವಿತ್ರಾ ಸೇರಿದಂತೆ 7 ಆರೋಪಿಗಳಿಗೆ ಜಾಮೀನು

ದರ್ಶನ್ ಪರ ವಕೀಲರ ವಾದವನ್ನು ಪುರಸ್ಕರಿಸಿರುವ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಅವರಿದ್ದ ನ್ಯಾಯಪೀಠ, ದರ್ಶನ್​ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ. ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ದರ್ಶನ್, ಪವಿತ್ರಾ ಗೌಡ, ಲಕ್ಷ್ಮಣ್ ಗೌಡ, ಪ್ರದೋಶ್ ಅವರಿಗೆ ಜಾಮೀನು ಸಿಕ್ಕಿದೆ.;

Update: 2024-12-13 09:50 GMT
ನಟ ದರ್ಶನ್‌ ಹಾಗೂ ಪವಿತ್ರಾ ಗೌಡಗೆ ಜಾಮೀನು ಮಂಜೂರು ಮಾಡಲಾಗಿದೆ.

ಚಿತ್ರದುರ್ಗದರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳಿಗೆ ಕೋರ್ಟ್ ಜಾಮೀನು ನೀಡಿದೆ.   ಇವರೆಲ್ಲರೂ ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲು ಸೇರಿ 130 ದಿನಗಳ ಮೇಲಾಗಿದ್ದವು.ಆದರೆ,  ಬೆನ್ನು ನೋವಿನ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದಿರುವ ನಟ ದರ್ಶನ್​ ಅದಾಗಲೇ ಜೈಲಿನಿಂದ ಹೊರಕ್ಕೆ ಬಂದಿದ್ದರು.  ಕಳೆದ ಒಂದೂವರೆ ತಿಂಗಳಿಂದ ಅವರು ಆಸ್ಪತ್ರೆಯಲ್ಲೇ ಇದ್ದಾರೆ. 

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್​ಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿತ್ತು. ದರ್ಶನ್ ಪರ ವಾದ ಮಂಡಿಸಿದ್ದ ಸಿವಿ ನಾಗೇಶ್ ಅವರು, ದರ್ಶನ್ ಅವರದ್ದು ರೇಣುಕಾ ಸ್ವಾಮಿ ಕೊಲೆಯಲ್ಲಿ ಪಾತ್ರವಿಲ್ಲ ಎಂದು ವಾದಿಸಿದ್ದರು. ಪೊಲೀಸರು ಕೆಲವು ಉತ್ಪ್ರೇಕ್ಷಿತ ಆರೋಪಗಳನ್ನು ದರ್ಶನ್ ವಿರುದ್ಧ ಮಾಡಿದ್ದಾರೆ ಎಂದು ವಾದಿಸಿದ್ದರು.

ದರ್ಶನ್ ಪರ ವಕೀಲರ ವಾದವನ್ನು ಪುರಸ್ಕರಿಸಿರುವ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಅವರಿದ್ದ ನ್ಯಾಯಪೀಠ, ದರ್ಶನ್​ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ. ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ದರ್ಶನ್, ಪವಿತ್ರಾ ಗೌಡ, ಲಕ್ಷ್ಮಣ್ ಗೌಡ, ಪ್ರದೋಶ್ ಅವರಿಗೆ ಜಾಮೀನು ಸಿಕ್ಕಿದೆ.  

Tags:    

Similar News