ಅಪ್ಪು ಅಭಿನಯದ ʻಅಂಜನಿ ಪುತ್ರʼ ಸಿನಿಮಾ ರೀರಿಲೀಸ್!

ಪವರ್‌ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌, ರಶ್ಮಿಕಾ ಮಂದಣ್ಣ, ಮುಖ್ಯಭೂಮಿಕೆಯಲ್ಲಿ ನಟಿಸಿದ್ದ ಅಂಜನಿ ಪುತ್ರ ಸಿನಿಮಾ ಮರು ಬಿಡುಗಡೆಯಾಗುತ್ತಿದೆ.;

Update: 2024-04-30 13:42 GMT
ಅಂಜನಿಪುತ್ರ ಸಿನಿಮಾ ಮರುಬಿಡುಗಡೆಯಾಗಲಿದೆ.
Click the Play button to listen to article

ಪವರ್‌ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌, ರಶ್ಮಿಕಾ ಮಂದಣ್ಣ ಮುಖ್ಯಭೂಮಿಕೆಯಲ್ಲಿ ನಟಿಸಿದ್ದ ಅಂಜನಿ ಪುತ್ರ ಸಿನಿಮಾ ಇದೀಗ ಮರು ಬಿಡುಗಡೆ ಆಗುತ್ತಿದೆ. ಮೇ 10ರಂದು ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ.

ಈ ಸಿನಿಮಾವನ್ನು ಎ ಹರ್ಷ ನಿರ್ದೇಶಿಸಿದ್ದು, ಎಂಎನ್ ಕುಮಾರ್ ನಿರ್ಮಿಸಿದ್ದಾರೆ. 2017ರ ಡಿಸೆಂಬರ್ 21ರಂದು ಚಿತ್ರ ಬಿಡುಗಡೆಯಾಗಿತ್ತು. ಚಿತ್ರದಲ್ಲಿ ಪವರ್ ಸ್ಟಾರ್ ಜೊತೆಗೆ ರಶ್ಮಿಕಾ ಮಂದಣ್ಣ ನಾಯಕಿಯಾಗಿದ್ದಾರೆ.

ರವಿ ಬಸ್ರೂರ್ ಈ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದರು. ಚಿತ್ರದಲ್ಲಿ ರಮ್ಯಾ ಕೃಷ್ಣ, ರವಿಶಂಕರ್, ಮುಖೇಶ್ ತಿವಾರಿ ಮತ್ತು ಇತರರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಸ್ವಾಮಿ ಚಿತ್ರದ ಛಾಯಾಗ್ರಾಹಕರು.

Tags:    

Similar News