ದುನಿಯಾ ವಿಜಯ್ ಸಿನಿಮಾ ವಿಕೆ29 ಗೆ ಮುಹೂರ್ತ
ದುನಿಯಾ ವಿಜಯ್ ಮತ್ತು ಜಡೇಶ್ ಕುಮಾರ್ ಹಂಪಿ ಕಾಂಬಿನೇಷನ್‌ನ ಹೊಸ ಸಿನಿಮಾ ವಿಕೆ29 ಗೆ ಮುಹೂರ್ತ ನೆರವೇರಿದೆ.;
ದುನಿಯಾ ವಿಜಯ್ ಮತ್ತು ಜಡೇಶ್ ಕುಮಾರ್ ಹಂಪಿ ಕಾಂಬಿನೇಷನ್‌ನ ಹೊಸ ಸಿನಿಮಾ ವಿಕೆ29 ಗೆ ಮುಹೂರ್ತ ನೆರವೇರಿದೆ. ಸಮಾರಂಭದಲ್ಲಿ ಕಾಟೇರ ನಿರ್ದೇಶಕ ತರುಣ್ ಕಿಶೋರ್ ಸುಧೀರ್ ಮತ್ತು ಚಿತ್ರ ನಿರ್ಮಾಪಕ ಗುರು ದೇಶಪಾಂಡೆ ಉಪಸ್ಥಿತರಿದ್ದರು.
ಈ ಚಿತ್ರದಲ್ಲಿ ರಚಿತಾರಾಮ್ ನಾಯಕಿಯಾಗಿ ನಟಿಸುತ್ತಿದ್ದು, ದುನಿಯಾ ವಿಜಯ್ ಪುತ್ರಿ ರಿತನ್ಯ (ಮೋನಿಕಾ) ಈ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. "ಡೇರ್ ಡೆವಿಲ್ ಮುಸ್ತಫಾ" ಖ್ಯಾತಿಯ ಶಿಶಿರ್ ಸಹ ಪ್ರಮುಖಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಈ ಕುರಿತು ಮಾತನಾಡಿರುವ ನಿರ್ದೇಶಕ ಜಡೇಶ ಕೆ ಹಂಪಿ, ಇದು ಆಳಿದವರ ಕಥೆಯಲ್ಲ. ಅಳಿದು ಉಳಿದವರ ಕಥೆ. ಕೋಲಾರ ಭಾಗದಲ್ಲಿ ನಡೆಯುವ ಕಥೆಯಾಗುವುದರಿಂದ ಸಂಭಾಷಣೆ ಕೋಲಾರದ ಭಾಷೆಯಲ್ಲೇ ಇರುತ್ತದೆ. ಕೋಲಾರ ಮೂಲದವರೇ ಆದ ಮಾಸ್ತಿ ಈ ಚಿತ್ರಕ್ಕೆ ಸಂಭಾಷಣೆ ಬರೆಯಲಿದ್ದಾರೆ. 90ರ ಕಾಲಘಟ್ಟದಲ್ಲಿ ನಡೆಯುವ ಸಿನಿಮಾ ಇದು. ಶಿವರಾಮ ಕಾರಂತರ ಚೋಮನ ದುಡಿ ಚಿತ್ರದಲ್ಲಿನ ಚೋಮನ ಪಾತ್ರ ನಮ್ಮ ಈ ಸಿನಿಮಾಕ್ಕೆ ಪ್ರೇರಣೆ. ಕೋಲಾರ, ಗುಡಿಬಂಡೆ ಮತ್ತಿತರ ಕಡೆ ಚಿತ್ರೀಕರಣ ನಡೆಯಲಿದೆ ಎಂದು ತಿಳಿಸಿದ್ದಾರೆ.