'ಕಲ್ಕಿ'ಯ ಅಶ್ವತ್ಥಾಮ ಟೀಸರ್ ರಿಲೀಸ್: ಹೇಗಿದೆ ಅಮಿತಾಭ್ ಬಚ್ಚನ್ ಪಾತ್ರ?
ಕಲ್ಕಿ ಸಿನಿಮಾದ ನಟ ಅಮಿತಾಭ್ ಬಚ್ಚನ್ ಅವರ ಪಾತ್ರದ ಟೀಸರ್ ಬಿಡುಗಡೆಯಾಗಿದೆ.;
ಪ್ರಭಾಸ್ ನಾಯಕನಾಗಿ ನಟಿಸಿರುವ ‘ಕಲ್ಕಿ 2898 AD’ ಚಿತ್ರತಂಡದಿಂದ ಶನಿವಾರ (ಏ.21) ಹೊಸ ಅಪ್‌ಡೇಟ್ ಹೊರಬಿದ್ದಿದ್ದು, ಸಿನಿಮಾದಲ್ಲಿ ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಅವರ ಪಾತ್ರದ ಟೀಸರ್ ಬಿಡುಗಡೆಯಾಗಿದೆ.
ಬಿಡುಗಡೆಯಾದ ಟೀಸರ್‌ನಲ್ಲಿ ಬಾಲಕನೊಬ್ಬ "ನೀನು ಸತ್ತಿಲ್ಲ.. ನೀನು ದೇವರಾ? ನೀನು ಯಾರು?" ಎಂದು ಕೇಳುವುದರೊಂದಿಗೆ ಟೀಸರ್ ಶುರುವಾಗುತ್ತದೆ. ಆಗ ಅಮಿತಾಬ್ ಬಚ್ಚನ್ ಹೇಳುತ್ತಾರೆ, "ನಾನು ದ್ವಾಪರ ಯುಗದಿಂದ ದಶಾವತಾರಕ್ಕಾಗಿ ಕಾಯುತ್ತಿದ್ದೇನೆ. ನಾನು ಗುರು ದ್ರೋಣಾಚಾರ್ಯರ ಮಗ ಅಶ್ವತ್ಥಾಮ" ಎಂದು ಅಲ್ಲಿಂದ ನಡೆದಿದ್ದಾನೆ. ಕಲ್ಕಿ ಚಿತ್ರದಲ್ಲಿ ಅಶ್ವತ್ಥಾಮನಾಗಿ ಅಮಿತಾಬ್ ಬಚ್ಚನ್ ಕಾಣಿಸಿಕೊಳ್ಳಲಿದ್ದಾರೆ.
ನಾಗ್ ಅಶ್ವಿನ್ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದು, ವೈಜಯಂತಿ ಮೂವೀಸ್ ಬರೋಬ್ಬರಿ 600 ಕೋಟಿ ರೂ ಬಜೆಟ್‌ನಲ್ಲಿ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಪುರಾಣ ಪ್ರೇರಿತ ವೈಜ್ಞಾನಿಕ ಕಥೆಯುಳ್ಳ ಸಿನಿಮಾ ಇದಾಗಿದ್ದು, ತೆಲುಗು, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿ ಭಾಷೆಯಲ್ಲಿ ಕಲ್ಕಿ ಚಿತ್ರ ತೆರೆಕಾಣಲಿದೆ. ಈ ಚಿತ್ರಕ್ಕೆ ಸಂತೋಷ್ ನಾರಾಯಣನ್ ಸಂಗೀತ ಸಂಯೋಜಿಸುತ್ತಿದ್ದಾರೆ.
ಈ ಸಿನಿಮಾದಲ್ಲಿ ಪ್ರಭಾಸ್ ನಾಯಕನಾಗಿ ನಟಿಸುತ್ತಿದ್ದು, ದೀಪಿಕಾ ಪಡುಕೋಣೆ, ಅಮಿತಾಬ್ ಬಚ್ಚನ್, ಕಮಲ್ ಹಾಸನ್, ದಿಶಾ ಪಟಾನಿ ತಾರಾಬಳಗದಲ್ಲಿದ್ದಾರೆ. ಕಲ್ಕಿ 2898 AD ಚಿತ್ರ ಮೇ 9 ರಂದು ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಈ ಹಿಂದೆ ಘೋಷಿಸಿತ್ತು. ಆದರೆ, ಚುನಾವಣೆ ಕಾರಣದಿಂದ ಮುಂದೂಡಿಕೆ ಮಾಡಲಾಗಿದೆ. ಆದರೆ ಸಿನಿಮಾ ರಿಲೀಸ್ ಬಗ್ಗೆ ಯಾವುದೇ ಘೋಷಣೆ ಆಗಿಲ್ಲ.