ಯಶ್ 'ಟಾಕ್ಸಿಕ್' ಚಿತ್ರ ತಂಡಕ್ಕೆ ಕರೀನಾ ಕಪೂರ್ ಬದಲಿಗೆ ನಯನತಾರಾ ಸೇರ್ಪಡೆ
ನಿರ್ದೇಶಕಿ ಗೀತು ಮೋಹನ್ ದಾಸ್ ಅವರು ಬಹುಭಾಷಾ ನಟಿ ನಯನತಾರಾ ಅವರನ್ನು ಸಂಪರ್ಕಿಸಿದ್ದು, ಅವರಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ.;
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್ ' ಚಿತ್ರದಲ್ಲಿ ಬಾಲಿವುಡ್ ಖ್ಯಾತ ನಟಿ ಕರೀನಾ ಕಪೂರ್ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತಿತ್ತು. ಆದರೆ, ಇದೀಗ ಆ ಜಾಗಕ್ಕೆ ನಯನತಾರಾ ಫಿಕ್ಸ್ ಆಗಿದ್ದಾರೆ.
ದಿನಾಂಕ ಹೊಂದಾಣಿಕೆಯಾಗದೇ ಅವರು ಈ ಚಿತ್ರಕ್ಕೆ ಕಾಲ್ ಶೀಟ್ ಕೊಡಲು ಆಗುತ್ತಿಲ್ಲ. ಇದರಿಂದ ಅವರು ಹಿಂದೆ ಸರಿದಿದ್ದು, ಚಿತ್ರ ತಂಡ ಕಿಯಾರಾ ಅಡ್ವಾಣಿ ಅವರನ್ನು ಸಂಪರ್ಕಿಸಿತಂತೆ. ಆದರೆ, ಅವರು ಕೂಡಾ ಒಪ್ಪಿಗೆ ಸೂಚಿಸಿಲ್ಲ. ಹಾಗಾಗಿ ನಿರ್ದೇಶಕಿ ಗೀತು ಮೋಹನ್ ದಾಸ್ ಅವರು ಬಹುಭಾಷಾ ನಟಿ ನಯನತಾರಾ ಅವರನ್ನು ಸಂಪರ್ಕಿಸಿದ್ದು, ಅವರಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ ಎಂದು ಪಿಂಕ್ ವಿಲ್ಲಾ ವೆಬ್ ಸೈಟ್ ವರದಿ ಮಾಡಿದೆ.
ಕೆವಿಎನ್ ಪ್ರೊಡಕ್ಷನ್ ಹಾಗೂ ಯಶ್ ಅವರ Monster Mind Creations ಜಂಟಿಯಾಗಿ ನಿರ್ಮಿಸುತ್ತಿರುವ ಚಿತ್ರ 2025ರ ಏಪ್ರಿಲ್ 10 ರಂದು ಕನ್ನಡ, ಇಂಗ್ಲೀಷ್, ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರ ತಂಡ ಹೇಳಿಕೊಂಡಿದೆ.