ಪ್ರಭಾಸ್- ದೀಪಿಕಾ ಜೋಡಿಯ 'ಕಲ್ಕಿ' ಸಿನಿಮಾ ರಿಲೀಸ್ ಡೇಟ್ ಅನೌನ್ಸ್!
ಸೂಪರ್‌ಸ್ಟಾರ್ ಪ್ರಭಾಸ್ ನಟನೆಯ 'ಕಲ್ಕಿ 2898 ಎಡಿ' ಸಿನಿಮಾ ರಿಲೀಸ್‌ಗೆ ಡೇಟ್ ಫಿಕ್ಸ್ ಆಗಿದೆ.;
ಸೂಪರ್‌ಸ್ಟಾರ್ ಪ್ರಭಾಸ್ ನಟನೆಯ 'ಕಲ್ಕಿ 2898 ಎಡಿ' ಸಿನಿಮಾ ರಿಲೀಸ್‌ಗೆ ಡೇಟ್ ಫಿಕ್ಸ್ ಆಗಿದೆ. ದೀಪಿಕಾ ಪಡುಕೋಣೆ, ಅಮಿತಾಭ್ ಬಚ್ಚನ್, ಕಮಲ್ ಹಾಸನ್ ಅಂತಹ ದಿಗ್ಗಜರು ನಟಿಸಿರುವ ಬಹುಕೋಟಿ ವೆಚ್ಚದ ಈ ಸಿನಿಮಾ ಕಳೆದ ಕೆಲವು ವರ್ಷಗಳಿಂದ ನಿರ್ಮಾಣ ಹಂತದಲ್ಲೇ ಇತ್ತು. ಕೊನೆಗೂ ಈ ಸಿನಿಮಾ ತೆರೆಗೆ ಬರಲು ಸಿದ್ಧವಾಗಿದ್ದು, ರಿಲೀಸ್ ಡೇಟ್ ಅನೌನ್ಸ್ ಮಾಡಿದೆ.
ಲೋಕಸಭೆ ಹಾಗೂ ಆಂಧ್ರಪ್ರದೇಶದ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ 'ಕಲ್ಕಿ 2828 AD' ಬಿಡುಗಡೆ ವಿಳಂಬ ಆಗಿದೆ ಎನ್ನಲಾಗಿದೆ. ಕೊನೆಗೂ ರಿಲೀಸ್ ಡೇಟ್ ಅನ್ನು ಫಿಕ್ಸ್ ಮಾಡಿದ್ದು, ಜೂನ್ 27ಕ್ಕೆ ವಿಶ್ವದಾದ್ಯಂತ ಅದ್ಧೂರಿಯಾಗಿ ಸಿನಿಮಾವನ್ನು ರಿಲೀಸ್ ಮಾಡುವುದಕ್ಕೆ ಚಿತ್ರತಂಡ ನಿರ್ಧರಿಸಿದೆ.
ಟಾಲಿವುಡ್‌ನ ವೈಜಯಂತಿ ಮೂವೀಸ್ ಬ್ಯಾನರ್‌ನ ಪ್ರತಿಷ್ಠಿತ ಸಿನಿಮಾವಿದು. 'ಮಹಾನಟಿ' ಸಿನಿಮಾದ ನಿರ್ದೇಶಕ ನಾಗ ಅಶ್ವಿನ್ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ಸಿನಿಮಾ ತಂಡ ಪ್ರಚಾರವನ್ನು ಆರಂಭಿಸಿದೆ. ಅಮಿತಾಭ್ ಬಚ್ಚನ್ ನಟಿಸಿರುವ ಅಶ್ವತ್ಥಾಮ ಪಾತ್ರದ ಲುಕ್ ಅನ್ನು ರಿಲೀಸ್ ಮಾಡುವ ಮೂಲಕ ಅಧಿಕೃತ ಪ್ರಚಾರಕ್ಕೆ ಚಾಲನೆ ನೀಡಿದೆ.