World Cup 2025| ಟೀಮ್ ಇಂಡಿಯಾಗೆ ಬಿಸಿಸಿಐನಿಂದ 51 ರೂ.ಕೋಟಿ ಬಹುಮಾನ ಘೋಷಣೆ
ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್ ಅವರು ತಂಡದ ಐತಿಹಾಸಿಕ ಸಾಧನೆಯನ್ನು ಶ್ಲಾಘಿಸಿ, ಇದು ಭಾರತದ 1983 ರ ಪುರುಷರ ವಿಶ್ವಕಪ್ ವಿಜಯದೊಂದಿಗೆ ಹೋಲುತ್ತದೆ ಎಂದು ಹೇಳಿದರು. ಭಾರತೀಯ ಮಹಿಳಾ ಕ್ರಿಕೆಟ್‌ಗೆ ಇದು ಸ್ಮರಣೀಯ ದಿನ.
2025 ರ ಮಹಿಳಾ ಏಕದಿನ ವಿಶ್ವಕಪ್ ಗೆದ್ದ ಭಾರತ
ಭಾರತದ ಮಹಿಳಾ ಕ್ರಿಕೆಟ್ ತಂಡವು ಭಾನುವಾರ ರಾತ್ರಿ ನವಿ ಮುಂಬೈನ ಡಿ.ವೈ.ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ರೋಚಕ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 52 ರನ್‌ಗಳಿಂದ ಸೋಲಿಸಿ, ಚೊಚ್ಚಲ ವಿಶ್ವಕಪ್ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದೆ. ಈ ಐತಿಹಾಸಿಕ ಗೆಲುವಿನ ಬೆನ್ನಲ್ಲೇ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಅವರು ಆಟಗಾರ್ತಿಯರು ಹಾಗೂ ಸಹಾಯಕ ಸಿಬ್ಬಂದಿಗೆ 51 ಕೋಟಿ ರೂ. ಬಹುಮಾನ ಘೋಷಣೆ ಮಾಡಿದ್ದಾರೆ.
1983ರ ಪುರುಷರ ವಿಶ್ವಕಪ್ ವಿಜಯಕ್ಕೆ ಹೋಲಿಕೆ
ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್ ಅವರು ತಂಡದ ಐತಿಹಾಸಿಕ ಸಾಧನೆ ಶ್ಲಾಘಿಸಿ, ಇದು ಭಾರತದ 1983 ರ ಪುರುಷರ ವಿಶ್ವಕಪ್ ವಿಜಯದೊಂದಿಗೆ ಹೋಲುತ್ತದೆ ಎಂದು ಹೇಳಿದರು.
ಭಾರತೀಯ ಮಹಿಳಾ ಕ್ರಿಕೆಟ್‌ಗೆ ಇದು ಸ್ಮರಣೀಯ ದಿನ. 1983 ರಲ್ಲಿ ಪುರುಷರ ತಂಡ ಸಾಧಿಸಿದ್ದನ್ನು ಇಂದು ಮುಂಬೈನಲ್ಲಿ ಭಾರತೀಯ ಮಹಿಳೆಯರು ಮರುಸೃಷ್ಟಿಸಿದ್ದಾರೆ. ಈ ಐತಿಹಾಸಿಕ ಗೆಲುವು ದೇಶದಲ್ಲಿ ಮಹಿಳಾ ಕ್ರಿಕೆಟ್‌ಗೆ ಪ್ರೋತ್ಸಾಹ ನೀಡಲಿದೆ ಎಂದು ತಿಳಿಸಿದರು.
ವಿಶ್ವಕಪ್‌ನಲ್ಲಿ ಮಹಿಳಾ ತಂಡ ಸವೆಸಿದ ಹಾದಿ (ಏಕದಿನ ಮಾದರಿ)
ಟಿ20 ವಿಶ್ವಕಪ್‌ನಲ್ಲಿ ಸಾಧನೆ
2009- ಇಂಗ್ಲೆಂಡ್‌ನಲ್ಲಿ ಆಯೋಜಿಸಿದ್ದ ವಿಶ್ವಕಪ್‌ನಲ್ಲಿ ಭಾರತ ತಂಡ ಸೆಮಿಫೈನಲ್ ಪ್ರವೇಶಿಸಿ, ಅಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋಲು ಅನುಭವಿಸಿತ್ತು.
2010- ವೆಸ್ಟ್ ಇಂಡೀಸ್‌ನಲ್ಲಿ ಆಯೋಜಿಸಿದ್ದ ವಿಶ್ವಕಪ್ ಟೂರ್ನಮೆಂಟ್‌ನಲ್ಲಿ ಭಾರತ ಸೆಮಿಫೈನಲ್ ಪ್ರವೇಶಿಸಿ ಆಸ್ಟ್ರೇಲಿಯಾ ವಿರುದ್ಧ ಸೋಲು ಅನುಭವಿಸಿತ್ತು.
2012- ಶ್ರೀಲಂಕಾ ಆಯೋಜಿಸಿದ್ದ ಟೂರ್ನಿಯಲ್ಲಿ ಭಾರತ ಗುಂಪು ಹಂತದಲ್ಲೇ ಹೊರಬಿದ್ದಿತ್ತು.
2014 -ಶ್ರೀಲಂಕಾ ಆಯೋಜಿಸಿದ್ದ ಟೂರ್ನಿಯಲ್ಲಿ ಭಾರತ ಗುಂಪು ಹಂತದಲ್ಲೇ ಹೊರಬಿದ್ದಿತ್ತು.
2016-ಭಾರತದಲ್ಲೇ ಆಯಜಿಸಿದ್ದ ವಿಶ್ವಕಪ್‌ನಲ್ಲಿ ಗುಂಪು ಹಂತದಲ್ಲೇ ಹೊರಬಿದ್ದಿತ್ತು.
2018 ವೆಸ್ಟ್ ಇಂಡೀಸ್‌ನಲ್ಲಿ ಆಯೋಜಿಸಿದ್ದ ವಿಶ್ವಕಪ್‌ನಲ್ಲಿ ಭಾರತ ಸೆಮಿಫೈನಲ್ ಪ್ರವೇಶಿಸಿ ಇಂಗ್ಲೆಂಡ್ ವಿರುದ್ಧ ಸೋಲು ಅನುಭವಿಸಿತ್ತು.
2020 ಆಸ್ಟ್ರೇಲಿಯಾದಲ್ಲಿ ಆಯೋಜನೆ. ಫೈನಲ್ ಪ್ರವೇಶಿಸಿದ್ದ ಭಾರತ ತಂಡ ಆಸೀಸ್ ವಿರುದ್ಧ ಸೋಲು ಅನುಭವಿಸಿ ರನ್ನರ್ಸ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು.
2023 - ದಕ್ಷಿಣ ಆಫ್ರಿಕಾದಲ್ಲಿ ಆಯೋಜಿಸಿದ್ದ ವಿಶ್ವಕಪ್‌ನಲ್ಲಿ ಭಾರತ ಸೆಮಿಫೈನಲ್ ಪ್ರವೇಶಿಸಿ ಆಸ್ಟ್ರೇಲಿಯಾ ವಿರುದ್ಧ ಸೋಲು ಅನುಭವಿಸಿತ್ತು.
2024 -ಯುಎಇನಲ್ಲಿ ಆಯೋಜಿಸಿದ್ದ ವಿಶ್ವಕಪ್‌ನಲ್ಲಿ ಭಾರತ ಗ್ರೂಪ್ ಸ್ಟೇಜ್‌ನಲ್ಲಿ ಹೊರಬಿದ್ದಿತ್ತು.