Devjit Saikia: ಬಿಸಿಸಿಐ ಕಾರ್ಯದರ್ಶಿಯಾಗಿ ದೇವಜಿತ್ ಸೈಕಿಯಾ ಆಯ್ಕೆ

Devjit Saikia: ಬಿಸಿಸಿಐ ಕಾರ್ಯದರ್ಶಿಯಾಗಿ ಯಶಸ್ವಿ ಆಡಳಿತ ನಡೆಸಿದ್ದಜಯ್ ಶಾ ಡಿಸೆಂಬರ್ 1 ರಂದು ಐಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು. ಅಲ್ಲಿಂದ ಸೈಕಿಯಾ ಅವರನ್ನು ಹಂಗಾಮಿ ಕಾರ್ಯದರ್ಶಿಯಾಗಿ ನೇಮಿಸಲಾಗಿತ್ತು. ಇದೀಗ ಪೂರ್ಣ ಅಧಿಕಾರ ಪಡೆದುಕೊಂಡಿದ್ದಾರೆ.;

Update: 2025-01-12 12:58 GMT
ದೇವಜಿತ್‌ ಸೈಕಿಯಾ

ಬಿಸಿಸಿಐ ನೂತನ ಕಾರ್ಯದರ್ಶಿಯಾಗಿ ದೇವಜಿತ್‌ ಸೈಕಿಯಾ (Devjit Saikia) ಭಾನುವಾರ ಆಯ್ಕೆಗೊಂಡಿದ್ದಾರೆ. ಮುಂಬೈನಲ್ಲಿ ನಡೆದ ಬಿಸಿಸಿಐ ವಿಶೇಷ ಸಾಮಾನ್ಯ ಸಭೆಯ (ಎಸ್‌ಜಿಎಂ)ಯಲ್ಲಿ ಸೈಕಿಯಾ ಹೆಸರನ್ನು ಅಧಿಕೃತವಾಗಿ ಘೋಷಿಸಲಾಯಿತು. ಖಜಾಂಚಿಯಾಗಿ ಪ್ರಭತೇಜ್ ಸಿಂಗ್ ಭಾಟಿಯಾ(Prabhtej Singh Bhatia) ಆಯ್ಕೆಯಾಗಿದ್ದಾರೆ.

ಬಿಸಿಸಿಐ ಕಾರ್ಯದರ್ಶಿಯಾಗಿ ಯಶಸ್ವಿ ಆಡಳಿತ ನಡೆಸಿದ್ದಜಯ್ ಶಾ ಡಿಸೆಂಬರ್ 1 ರಂದು ಐಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು. ಅಲ್ಲಿಂದ ಸೈಕಿಯಾ ಅವರನ್ನು ಹಂಗಾಮಿ ಕಾರ್ಯದರ್ಶಿಯಾಗಿ ನೇಮಿಸಲಾಗಿತ್ತು. ಇದೀಗ ಪೂರ್ಣ ಅಧಿಕಾರ ಪಡೆದುಕೊಂಡಿದ್ದಾರೆ.

56 ವರ್ಷದ ಸೈಕಿಯಾ, ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಅಸ್ಸಾಂ ತಂಡದ ಪರವಾಗಿ ಆಡಿದ್ದಾರೆ. ಒಟ್ಟು 4 ಪಂದ್ಯಗಳಲ್ಲಿ 53 ರನ್ ಮತ್ತು 9 ವಿಕೆಟ್‌ಗಳನ್ನು ಉರುಳಿಸಿದ್ದಾರೆ. ಕ್ರಿಕೆಟ್‌ನಿಂದ ದೂರವಾದ ಅವರು ವಕೀಲಿಕೆ ವೃತ್ತಿಯನ್ನು ಆಯ್ಕೆ ಮಾಡಿಕೊಂಡಿದ್ದರು. ನಂತರ ಅವರು ಗುವಾಹಟಿ ಹೈಕೋರ್ಟ್‌ನಲ್ಲಿ ವಕೀಲಿಕೆ ಮಾಡಿದ್ದರು.

ಬಿಸಿಸಿಐ ಇನ್ನಷ್ಟು ಶ್ರೀಮಂತ

ವರ್ಷ ಕಳೆದಂತೆ ಬಿಸಿಸಿಐ ಹೆಚ್ಚು ಶ್ರೀಮಂತವಾಗುತ್ತಿದೆ. ಕಳೆದ ವರ್ಷ 4200 ಕೋಟಿ ರೂ. ಗಳು ಹೆಚ್ಚುವರಿ ಆದಾಯ ಸಂಗ್ರಹವಾಗಿತ್ತು. ಒಟ್ಟಾರೆ 2024ರಲ್ಲಿ ಬಿಸಿಸಿಐಗೆ 20,686 ಕೋಟಿ ರೂ. ಗಳ ಆದಾಯ ಸಂಗ್ರಹಿಸಿತ್ತು. ಐಪಿಎಲ್‌ ಮತ್ತು ದ್ವಿಪಕ್ಷೀಯ ಸರಣಿಗಳ ಮಾಧ್ಯಮ ಪ್ರಸಾರದ ಹಕ್ಕುಗಳಿಂದ ಬಿಸಿಸಿಐಗೆ ಹೆಚ್ಚಿನ ಆದಾಯ ಹರಿದು ಬಂದಿತ್ತು.

ಕಟ್ಟರ್‌ ಕ್ರಿಕೆಟ್‌ ಅಭಿಮಾನಿಗಳನ್ನು ಹೊಂದಿರು ಭಾರತ ವಿಶ್ವದ ಅತಿದೊಡ್ಡ ಕ್ರಿಕೆಟ್ ಮಾರುಕಟ್ಟೆ. ಹೀಗಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಆದಾಯದಲ್ಲಿ ಬಿಸಿಸಿಐಗೆ ದೊಡ್ಡ ಪಾಲು ಸಿಗುತ್ತದೆ. 2022ರ ಜೂನ್‌ನಲ್ಲಿನಡೆದ ಹರಾಜಿನಲ್ಲಿ ಐದು ವರ್ಷಗಳ ಅವಧಿಗೆ ಐಪಿಎಲ್ ಮಾಧ್ಯಮ ಹಕ್ಕುಗಳನ್ನು 48,390 ಕೋಟಿ ರೂ. ಗಳಿಗೆ ಮಾರಾಟ ಮಾಡಲಾಗಿತ್ತು.

2024-25ರ ಆರ್ಥಿಕ ಸಾಲಿನಲ್ಲಿ ಬಿಸಿಸಿಐ 10,054 ಕೋಟಿ ರೂಪಾಯಿಗಳನ್ನು ಗಳಿಸುವ ನಿರೀಕ್ಷೆಯಿದೆ ಮತ್ತು ಒಟ್ಟು ಬಜೆಟ್ ವೆಚ್ಚವನ್ನು 2,348 ಕೋಟಿ ರೂಪಾಯಿಗಳಿಗೆ ನಿಗದಿಪಡಿಸಲಾಗಿದೆ. ಬಿಸಿಸಿಐನ 38 ರಾಜ್ಯಗಳ ಕ್ರಿಕೆಟ್‌ ಮಂಡಳಿಗಳನ್ನು ಹೊಂದಿದ್ದು, ಇವುಗಳು ವಾರ್ಷಿಕ ಅನುದಾನವನ್ನು ಅವಲಂಬಿಸಿವೆ. ಬಿಸಿಸಿಐನ ದಾಖಲೆಗಳ ಪ್ರಕಾರ ರಾಜ್ಯದ ಪ್ರತಿಯೊಂದು ಕ್ರಿಕೆಟ್‌ ಮಂಡಳಿಯು ವಾರ್ಷಿಕವಾಗಿ ಸುಮಾರು 499 ಕೋಟಿ ರೂ. ಗಳನ್ನು ಪಡೆಯಲಿವೆ. 

Tags:    

Similar News