IPL 2024| 17ನೇ ಆವೃತ್ತಿಯ ಚಾಂಪಿಯನ್ ಪಟ್ಟ ಅಲಂಕರಿಸಿದ ಕೆಕೆಆರ್
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024)ನ 17ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಗೆದ್ದು ಬೀಗುವ ಮೂಲಕ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಸನ್ ರೈಸರ್ಸ್ ಹೈದರಾಬಾದ್ ತಂಡ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಆದರೆ ಕೆಕೆಆರ್ ತಂಡದ ಕರಾರುವಾಕ್ ದಾಳಿ ಮುಂದೆ ಎಸ್‌ಆರ್‌ಹೆಚ್ ಬ್ಯಾಟರ್‌ಗಳ ಆಟ ನಡೆಯಲಿಲ್ಲ. ಅಂತಿಮವಾಗಿಕೇವಲ 18.3 ಓವರ್‌ಗಳಲ್ಲಿ 113 ರನ್‌ಗಳಿಸಿ ಎಸ್‌ಆರ್‌ಹೆಚ್ ಆಲ್ ಔಟ್ ಆಯಿತು.
ನಂತರ ಬ್ಯಾಟಿಂಗ್‌ಗೆ ಬಂದ ಕೆಕೆಆರ್ ತಂಡ 114 ರನ್‌ಗಳ ಸುಲಭ ಗುರಿ ಬೆನ್ನತ್ತಿತು. ಕೊಲ್ಕತ್ತಾ ನೈಟ್ ರೈಡರ್ಸ್ ಪರ ಆರಂಭಿಕ ಆಟಗಾರ ರಹಮಾನುಲ್ಲಾ ಗುರ್ಬಾಝ್ (39) ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಇನ್ನು 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವೆಂಕಟೇಶ್ ಅಯ್ಯರ್ ಸ್ಪೋಟಕ ಇನಿಂಗ್ಸ್ ಆಡಿದರು. ಕೇವಲ 26 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 4 ಫೋರ್‌ಗಳೊಂದಿಗೆ ಅಜೇಯ 52 ರನ್ ಬಾರಿಸುವ ಮೂಲಕ 10.3 ಓವರ್‌ಗಳಲ್ಲಿ ಕೆಕೆಆರ್ ತಂಡವನ್ನು ಗುರಿ ಮುಟ್ಟಿಸಿದರು.
ಈ ಮೂಲಕ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಕೆಕೆಆರ್ ಪಡೆ 3ನೇ ಬಾರಿ ಟ್ರೋಫಿ ಎತ್ತಿ ಹಿಡಿದಿರುವುದು ವಿಶೇಷ.
ಅತ್ತ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಗೆಲುವಿನ ನಗೆ ಬೀರುತ್ತಿದ್ದರೆ, ಇತ್ತ ಸನ್ ರೈಸರ್ಸ್ ಹೈದರಾಬಾದ್ ತಂಡದ ಮಾಲಕಿ ಕಾವ್ಯ ಮಾರನ್ ಬಿಕ್ಕಳಿಸಿ ಅಳುತ್ತಿರುವ ದೃಶ್ಯ ಕಂಡು ಬಂತು. ಸೋಲಿನ ನೋವನ್ನು ಅದುಮಿಟ್ಟುಕೊಳ್ಳಲಾಗದೇ ಕಣ್ಣೀರು ಸುರಿಸಿದರು. ಇದೀಗ ಎಸ್‌ಆರ್‌ಹೆಚ್ ಮಾಲಕಿಯ ಕಣ್ಣೀರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
A season to be proud of 🧡#KKRvSRH #IPLonJioCinema #IPLFinalonJioCinema pic.twitter.com/rmgo2nU2JM
— JioCinema (@JioCinema) May 26, 2024