IPL 2025- RCB Unboxing | ರಜತ್ ಪಾಟಿದಾರ್‌ಗೆ ಬೆಂಬಲ ಕೊಡಿ; ಅಭಿಮಾನಿಗಳಿಗೆ ಕೊಹ್ಲಿ ಮನವಿ

IPL 2025 RCB Unboxing :ಫಾಫ್ ಡು ಪ್ಲೆಸಿಸ್ ಅವರನ್ನು ಮೆಗಾ ಹರಾಜಿಗೆ ಬಿಡುಗಡೆ ಮಾಡಿದ ನಂತರ, ಯುವ ಬ್ಯಾಟ್ಸ್‌ಮನ್ ರಜತ್ ಪಾಟಿದಾರ್‌ಗೆ ಆರ್‌ಸಿಬಿ ನಾಯಕತ್ವವನ್ನು ನೀಡಲಾಗಿದೆ.;

Update: 2025-03-18 05:04 GMT

ಮುಂಬರುವ 2025ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಪಂದ್ಯಾವಳಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವನ್ನು ಮುನ್ನಡೆಸುವ ರಜತ್ ಪಾಟಿದಾರ್‌ಗೆ (ರಜತ್ ಪಾಟಿದಾರ್) ಅಭಿಮಾನಿಗಳು ಪ್ರೀತಿ ಮತ್ತು ಬೆಂಬಲವನ್ನು ನೀಡಬೇಕೆಂದು ಹಿರಿಯ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ (ವಿರಾಟ್ ಕೊಹ್ಲಿ) ವಿನಂತಿಸಿದ್ದಾರೆ.



ಸೋಮವಾರ ಎಂ ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದ ಆರ್‌ಸಿಬಿಯ ಅನ್ ಕಾರ್ಯಕ್ರಮದಲ್ಲಿ ಸಾವಿರಾರು ಅಭಿಮಾನಿಗಳು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ವಿರಾಟ್ ಕೊಹ್ಲಿ, ಹೊಸ ನಾಯಕ ರಜತ್ ಪಾಟಿದಾರ್‌ಗೆ ಸಾಕಷ್ಟು ಪ್ರೀತಿ ಮತ್ತು ಬೆಂಬಲವನ್ನು ನೀಡಬೇಕೆಂದು ಮಾಜಿ ನಾಯಕ ಒತ್ತಾಯಿಸಿದ್ದಾರೆ.

ಫಾಫ್ ಡು ಪ್ಲೆಸಿಸ್ ಅವರನ್ನು ಮೆಗಾ ಹರಾಜಿಗೆ ಬಿಡುಗಡೆ ಮಾಡಿದ ನಂತರ, ಯುವ ಬ್ಯಾಟ್ಸ್‌ಮನ್ ರಜತ್ ಪಾಟಿದಾರ್‌ಗೆ ಆರ್‌ಸಿಬಿ ನಾಯಕತ್ವವನ್ನು ನೀಡಲಾಗಿದೆ. ಈ ಹಿನ್ನೆಲೆಯಲ್ಲಿ, ರಜತ್ ಪಾಟಿದಾರ್‌ಗೆ ಈ ಬಾರಿ ಐಪಿಎಲ್ ಪಂದ್ಯಾವಳಿಯಲ್ಲಿ ನಾಯಕನಾಗಿ ದೊಡ್ಡ ಸವಾಲು ಎದುರಾಗಲಿದೆ. ಇದರ ನಡುವೆ ಅಭಿಮಾನಿಗಳು ಕೂಡ ರಜತ್‌ಗೆ ಬೆಂಬಲ ನೀಡಬೇಕೆಂದು ಹೇಳಿದ್ದಾರೆ.

"ಮುಂದೆ ಆರ್‌ಸಿಬಿಯನ್ನು ಒಬ್ಬ ಯುವಕ ದೀರ್ಘಕಾಲ ಮುನ್ನಡೆಸಲಿದ್ದಾನೆ. ಆದ್ದರಿಂದ ನಿಮ್ಮಿಂದ ಸಾಧ್ಯವಾದಷ್ಟು ಪ್ರೀತಿ ಹಾಗೂ ಬೆಂಬಲವನ್ನು ನೀಡಿ. ಅವರು ಅಸಾಧಾರಣ ಸಾಮರ್ಥ್ಯವನ್ನು ಹೊಂದಿದ್ದಾರೆ. ರಜತ್ ಪಾಟಿದಾರ್ ಅವರ ಮೇಲೆ ದೊಡ್ಡ ಜವಾಬ್ದಾರಿ ಇದೆ. ಈ ಅದ್ಭುತ ಫ್ರಾಂಚೈಸಿಯನ್ನು ಮುನ್ನಡೆಸಲಿರುವ ರಜತ್ ಉತ್ತಮವಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಅವರಿಗೆ ಅಗತ್ಯವಿರುವ ಎಲ್ಲಾ ಬೆಂಬಲ ಸಿಗಲಿದೆ" ಎಂದು ವಿರಾಟ್ ಕೊಹ್ಲಿ ಹೇಳಿದರು.

ಫಾಫ್ ಡು ಪ್ಲೆಸಿಸ್ ಬೆಂಗಳೂರು ಫ್ರಾಂಚೈಸಿಯನ್ನು ತೊರೆದ ನಂತರ ಆರ್‌ಸಿಬಿ ತಂಡದ ನಾಯಕತ್ವವನ್ನು ರಜತ್ ಪಾಟಿದಾರ್‌ಗೆ ನೀಡಲಾಗಿದೆ. 2021ರಿಂದಲೂ ರಜತ್ ಪಾಟಿದಾರ್ ಆರ್‌ಸಿಬಿ ಪರ ಆಡುತ್ತಿದ್ದಾರೆ ಮತ್ತು ಹಲವಾರು ಮಹತ್ವದ ಇನ್ನಿಂಗ್ಸ್‌ಗಳನ್ನು ಅವರು ಆಡಿದ್ದಾರೆ. ದೇಶೀಯ ಕ್ರಿಕೆಟ್‌ನಲ್ಲಿಯೂ ನಾಯಕನಾಗಿ ಯಶಸ್ಸು ಕಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ನಾಯಕತ್ವವನ್ನು ನೀಡಲಾಗಿದೆ.

ಆರ್‌ಸಿಬಿಗೆ ಮೊದಲ ಎದುರಾಳಿ ಕೆಕೆಆರ್

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಎಲ್ಲಾ ಆಟಗಾರರು ಕೂಡ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭ್ಯಾಸ ನಡೆಸುತ್ತಿದ್ದಾರೆ. ಆರ್‌ಸಿಬಿ ತನ್ನ ಮೊದಲ ಪಂದ್ಯವನ್ನು ಮಾರ್ಚ್ 22 ರಂದು ಕೋಲ್ಕತ್ತಾ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಆಡಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ:

 ವಿರಾಟ್ ಕೊಹ್ಲಿ,  ರಜತ್ ಪಾಟಿದಾರ್ ,  ಯಶ್ ದಯಾಳ್, ಜಾಶ್ ಹೇಜಲ್‌ವುಡ್ , ಫಿಲ್ ಸಾಲ್ಟ್,  ಜಿತೇಶ್ ಶರ್ಮಾ, ಭುವನೇಶ್ವರ್ ಕುಮಾರ್, ಲಿಯಾಮ್ ಲಿವಿಂಗ್‌ಸ್ಟೋನ್,  ರಾಸಿಕ್ ದಾರ್ ,  ಕೃನಾಲ್ ಪಾಂಡ್ಯ, ಸುಯಾಶ್ ಶರ್ಮಾ,  ಜಾಕೋಬ್ ಬೆಥೆಲ್,  ಟಿಮ್ ಡೇವಿಡ್, ದೇವದತ್ ಪಡಿಕ್ಕಲ್,  ರೋಮಾರಿಯೊ ಶೆಫರ್ಡ್, ನುವಾನ್ ತುಷಾರ, ಲುಂಗಿ ಎನ್‌ಗಿಡಿ, ಸ್ವಪ್ನಿಲ್ ಸಿಂಗ್, ಮನೋಜ್ ಭಾಂಡಗೆ, ಸ್ವಸ್ತಿಕ್ ಚಿಕಾರ, ಅಭಿನಂದನ್ ಸಿಂಗ್,ಮೋಹಿತ್ ರಾಥಿ. 

Tags:    

Similar News