ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಗೆ ಜಸ್ಪ್ರೀತ್ ಬುಮ್ರಾ ನಾಮನಿರ್ದೇಶನ

Jasprit Bumrah : ಬ್ರಿಸ್ಬೇನ್ ಮತ್ತು ಮೆಲ್ಬೋರ್ನ್ ಟೆಸ್ಟ್ ಎರಡರಲ್ಲೂ ಅವರ ಅತ್ಯುತ್ತಮ ಪ್ರದರ್ಶನ ನೀಡಿದ್ದ ಅವರುಒಂಬತ್ತು ವಿಕೆಟ್‌ಗಳನ್ನು ಕಬಳಿಸಿದ್ದರು. ಇದು ಭಾರತದ ಹೋರಾಟವನ್ನು ಜೀವಂತವಾಗಿರಿಸಲು ನೆರವಾಗಿತ್ತು.;

Update: 2025-01-07 11:53 GMT
ಜಸ್‌ಪ್ರಿತ್‌ ಬುಮ್ರಾ

ಇತ್ತೀಚೆಗೆ ಮುಕ್ತಾಯಗೊಂಡ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಅದ್ಭುತ ಬೌಲಿಂಗ್‌ ಪ್ರದರ್ಶನ ನೀಡಿದ ಭಾರತದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಅವರನ್ನು 2024ರ ಐಸಿಸಿ ಪುರುಷರ ತಿಂಗಳ ಆಟಗಾರ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲಾಗಿದೆ.

ಡಿಸೆಂಬರ್ ತಿಂಗಳಲ್ಲಿ, ಬುಮ್ರಾ ಮೂರು ಟೆಸ್ಟ್‌ಗಳಲ್ಲಿ 14.22 ಸರಾಸರಿಯಲ್ಲಿ 22 ವಿಕೆಟ್‌ಗಳನ್ನು ಉರುಳಿಸಿದ್ದರು. 31 ವರ್ಷದ ಬುಮ್ರಾ ಐದು ಟೆಸ್ಟ್‌ಗಳಲ್ಲಿ 32 ವಿಕೆಟ್‌ ಪಡೆದಿದ್ದಾರೆ. ದುರದೃಷ್ಟವಶಾತ್ ಬೆನ್ನುನೋವಿನಿಂದಾಗಿ ಸಿಡ್ನಿಯಲ್ಲಿ ನಡೆದ ಪಂದ್ಯದ ಎರಡನೇ ಇನಿಂಗ್ಸ್‌ನಲ್ಲಿ ಅವರಿಗೆ ಬೌಲಿಂಗ್ ಮಾಡಲು ಸಾಧ್ಯವಾಗಲಿಲ್ಲ. ಇಲ್ಲದೇ ಹೋಗಿದ್ದರೆ ವಿಕೆಟ್‌ಗಳ ಸಂಖ್ಯೆ ಇನ್ನೂ ಹೆಚ್ಚಾಗುತ್ತಿತ್ತು.

ಬ್ರಿಸ್ಬೇನ್ ಮತ್ತು ಮೆಲ್ಬೋರ್ನ್ ಟೆಸ್ಟ್ ಎರಡರಲ್ಲೂ ಅವರ ಅತ್ಯುತ್ತಮ ಪ್ರದರ್ಶನ ನೀಡಿದ್ದ ಅವರುಒಂಬತ್ತು ವಿಕೆಟ್‌ಗಳನ್ನು ಕಬಳಿಸಿದ್ದರು. ಇದು ಭಾರತದ ಹೋರಾಟವನ್ನು ಜೀವಂತವಾಗಿರಿಸಲು ನೆರವಾಗಿತ್ತು.

ಭಾರತ ವಿರುದ್ಧ ಟೆಸ್ಟ್‌ನಲ್ಲಿ 3-1 ಅಂತರದಲ್ಲಿ ಜಯ ಸಾಧಿಸಿರುವ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಮತ್ತು ದಕ್ಷಿಣ ಆಫ್ರಿಕಾದ ವೇಗಿ ಡೇನ್ ಪ್ಯಾಟರ್ಸನ್ ಪ್ರಶಸ್ತಿಗಾಗಿ ಬುಮ್ರಾ ಅವರೊಂದಿಗೆ ಸ್ಪರ್ಧಿಸುತ್ತಿದ್ದಾರೆ. ವೇಗಿ ಕಮಿನ್ಸ್ ಭಾರತ ವಿರುದ್ಧದ ಮೂರು ಟೆಸ್ಟ್ ಪಂದ್ಯಗಳಲ್ಲಿ 17.64 ಸರಾಸರಿಯಲ್ಲಿ 17 ವಿಕೆಟ್‌ ಪಡೆದಿದ್ದಾರೆ.

ಅಡಿಲೇಡ್‌ನಲ್ಲಿ ಅವರು ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದು, 57 ರನ್‌ಗೆ 5 ವಿಕೆಟ್‌ ಉರುಳಿಸಿದ್ದರು. ಇದು ಆತಿಥೇಯರಿಗೆ 10 ವಿಕೆಟ್‌ಗಳ ಭರ್ಜರಿ ಗೆಲುವು ಪಡೆಯಲು ಸಹಾಯ ಮಾಡಿತ್ತು. ಮೆಲ್ಬೋರ್ನ್‌ನಲ್ಲಿ ಕಮಿನ್ಸ್ 49 ಮತ್ತು 41 ರನ್ ಗಳಿಸುವ ಮೂಲಕ ಬ್ಯಾಟಿಂಗ್‌ನಲ್ಲಿಯೂ ಉತ್ತಮ ಕೊಡುಗೆ ನೀಡಿದ್ದರು.

ಶ್ರೀಲಂಕಾ ಮತ್ತು ಪಾಕಿಸ್ತಾನದ ವಿರುದ್ಧ ದಕ್ಷಿಣ ಆಫ್ರಿಕಾದ ಪ್ಯಾಟರ್ಸನ್ ಅವರ ಬೌಲಿಂಗ್ ಕೂಡ ದಕ್ಷಿಣ ಆಫ್ರಿಕಾ ತಂಡದ ಗೆಲವಿಗೆ ನೆರವಾಗಿತ್ತು.

ಈ ವರ್ಷದಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ದಕ್ಷಿಣ ಆಫ್ರಿಕಾ ತಂಡದ ಸ್ಥಾನ ಭದ್ರಗೊಂಡಿದೆ. ಪ್ಯಾಟರ್ಸನ್‌ ಎರಡು ಟೆಸ್ಟ್‌ಗಳಲ್ಲಿ 16.92 ಸರಾಸರಿಯಲ್ಲಿ 13 ವಿಕೆಟ್‌ ಪಡೆದಿದ್ದಾರೆ. 

Tags:    

Similar News