Indian Cricket | ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಸ್ಪಿನ್ನರ್​ ರವಿಚಂದ್ರನ್ ಅಶ್ವಿನ್

ಚೆನ್ನೈ ಮೂಲದ 38ರ ಹರೆಯದ ವೇಗದ ಬೌಲರ್​ ಟೆಸ್ಟ್ ಕ್ರಿಕೆಟ್ ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್​​ನಲ್ಲಿ ಭಾರತದ ಪರ ಎರಡನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ಖ್ಯಾತಿ ಪಡೆದಿದ್ದಾರೆ.

Update: 2024-12-18 06:35 GMT
ಭಾರತ ತಂಡದ ಆಟಗಾರ ಆರ್​. ಅಶ್ವಿನ್​.

ಬಾರ್ಡರ್​ ಗವಾಸ್ಕರ್​ ಟ್ರೋಫಿಯ ಭಾಗವಾಗಿ ಬ್ರಿಸ್ಬೇನ್​ನಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯದ ಬಳಿಕ ಭಾರತದ ತಂಡದ ಹಿರಿಯ ಸ್ಪಿನ್ನರ್​ ರವಿಚಂದ್ರನ್​ ಅಶ್ವಿನ್ ಬುಧವಾರ ನಿವೃತ್ತಿ ಘೋಷಿಸಿದ್ದಾರೆ. ಮೂರನೇ ಪಂದ್ಯ ಡ್ರಾಗೊಂಡ ಬಳಿಕ ಬುಧವಾರ (ಡಿಸೆಂಬರ್ 18) ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದರು.


ಚೆನ್ನೈ ಮೂಲದ 38ರ ಹರೆಯದ ವೇಗದ ಬೌಲರ್​ ಟೆಸ್ಟ್ ಕ್ರಿಕೆಟ್ ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್​​ನಲ್ಲಿ ಭಾರತದ ಪರ ಎರಡನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ಖ್ಯಾತಿ ಪಡೆದಿದ್ದಾರೆ.

ಅಶ್ವಿನ್ ಭಾರತ ತಂಡದ ಪರವಾಗಿ 106 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ನವೆಂಬರ್ 6, 2011 ರಂದು ದೆಹಲಿಯಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಅವರು ಭಾರತ ತಮಡಕ್ಕೆ ಪದಾರ್ಪಣೆ ಮಾಡಿದ್ದರು.

ಟೆಸ್ಟ್ ಕ್ರಿಕೆಟ್​ನಲ್ಲಿ ಒಟ್ಟು 537 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಅನಿಲ್ ಕುಂಬ್ಳೆ ಅವರು ತಮ್ಮ ವೃತ್ತಿ ಜೀವನದಲ್ಲಿ ಭಾರತ ಪರ 619 ಟೆಸ್ಟ್​ ವಿಕೆಟ್ ಪಡೆದು ಮೊದಲ ಸ್ಥಾನದಲ್ಲಿ ಇದ್ದರೆ ಅಶ್ವಿನ್ ನಂತರದ ಸ್ಥಾನದಲ್ಲಿದ್ದಾರೆ.

116 ಏಕದಿನ ಪಂದ್ಯಗಳನ್ನುಆಡಿರುವ ಆರ್. ಅಶ್ವಿನ್​ 156 ವಿಕೆಟ್ ಹಾಗೂ 65 ಟಿ20 ಪಂದ್ಯಗಳಲ್ಲಿ 72 ವಿಕೆಟ್ ಪಡೆದಿದ್ದಾರೆ.

ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್​​ನಲ್ಲಿ (ಡಬ್ಲ್ಯುಟಿಸಿ) ಅಶ್ವಿನ್ 41 ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ ಮತ್ತು 195 ವಿಕೆಟ್​​ಗಳನ್ನು ಉರುಳಿಸಿದ್ದಾರೆ. 

Tags:    

Similar News