Vinod Kambli : ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆಸ್ಪತ್ರೆಗೆ ದಾಖಲು

ಕಾಂಬ್ಳಿ ಕೆಲವು ಸಮಯದಿಂದ ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಅವರು ತಮ್ಮ ದೀರ್ಘಕಾಲದ ಸ್ನೇಹಿತ ಸಚಿನ್ ತೆಂಡೂಲ್ಕರ್ ಕೂಡ ಭಾಗವಹಿಸಿದ್ದ ಸಮಾರಂಭದಲ್ಲಿ ನಿಶ್ಯಕ್ತಿಯಿಂದ ಕಾಣಿಸಿಕೊಂಡಿದ್ದರು.

Update: 2024-12-24 01:00 GMT
ವಿನೋದ್‌ ಕಾಂಬ್ಳಿ (ಸಂಗ್ರಹ ಚಿತ್ರ)

ಮುಂಬೈ: ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಥಾಣೆ ಜಿಲ್ಲೆಯ ಭಿವಾಂಡಿಯ ಕಲ್ಹೇರ್ ಪ್ರದೇಶದ ಆಸ್ಪತ್ರೆಯ ಮಾಲೀಕರಾಗಿರುವ ಕಾಂಬ್ಳಿಯ ಅಭಿಮಾನಿಯೊಬ್ಬರು ಅವರನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. 52 ವರ್ಷದ ವಿನೋದ್‌ ಕಾಂಬ್ಳಿ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ. ಆದರೆ ಅವರನ್ನು ಆಸ್ಪತ್ರೆಗೆ ದಾಖಲಿಸಲು ನಿಖರವಾದ ಕಾರಣಗಳನ್ನು ಕಂಡುಹಿಡಿಯಲು ಸಾಧ್ಯವಾಗಿಲ್ಲ.

1993-2000ರ ಅವಧಿಯಲ್ಲಿ ಭಾರತಕ್ಕಾಗಿ 17 ಟೆಸ್ಟ್ ಮತ್ತು 104 ಏಕದಿನ ಪಂದ್ಯಗಳನ್ನು ಆಡಿರುವ ಕಾಂಬ್ಳಿ, ಇತ್ತೀಚೆಗೆ ಇಲ್ಲಿನ ಶಿವಾಜಿ ಪಾರ್ಕ್‌ನಲ್ಲಿ ನಡೆದ ದಿಗ್ಗಜ ಕೋಚ್ ರಮಾಕಾಂತ್ ಅಚ್ರೇಕರ್ ಅವರ ಸ್ಮಾರಕದ ಉದ್ಘಾಟನೆಯಲ್ಲಿ ಭಾಗವಹಿಸಿದ್ದರು.

ಕಾಂಬ್ಳಿ ಕೆಲವು ಸಮಯದಿಂದ ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಅವರು ತಮ್ಮ ದೀರ್ಘಕಾಲದ ಸ್ನೇಹಿತ ಸಚಿನ್ ತೆಂಡೂಲ್ಕರ್ ಕೂಡ ಭಾಗವಹಿಸಿದ್ದ ಸಮಾರಂಭದಲ್ಲಿ ನಿಶ್ಯಕ್ತಿಯಿಂದ ಕಾಣಿಸಿಕೊಂಡಿದ್ದರು. 

Tags:    

Similar News