Women's T20 World Cup | ಭಾರತ ಮಹಿಳಾ ತಂಡ ಪ್ರಕಟ; ಕನ್ನಡತಿ ಶ್ರೇಯಾಂಕಾಗೆ ಸ್ಥಾನ

ಈ ತಂಡದಲ್ಲಿ ಕರ್ನಾಟಕದ ಯುವ ಆಲ್‌ರೌಂಡರ್‌ ಶ್ರೇಯಾಂಕಾ ಪಾಟೀಲ್ ಸ್ಥಾನ ಪಡೆದಿದ್ದು, ಅದಕ್ಕೂ ಮುನ್ನ ಅವರು ಫಿಟ್ನೆಸ್ ಅನ್ನು ಸಾಬೀತುಪಡಿಸಬೇಕಾಗಿದೆ. ಕಳೆದ ಏಷ್ಯಾಕಪ್ ಟೂರ್ನಿಯ ವೇಳೆ ಶ್ರೇಯಾಂಕಾ ಗಾಯಗೊಂಡಿದ್ದರು.;

Update: 2024-08-27 08:19 GMT
ಮಹಿಳಾ ಟಿ20 ವಿಶ್ವಕಪ್ ಕ್ರಿಕೆಟ್ಗೆ ಮಹಿಳಾ ತಂಡವನ್ನು ಪ್ರಕಟಿಸಲಾಗಿದೆ.
Click the Play button to listen to article

ಮಹಿಳಾ ಟಿ20 ವಿಶ್ವಕಪ್ ಕ್ರಿಕೆಟ್‌ಗೆ ಮಹಿಳಾ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಅಕ್ಟೋಬರ್ 3 ರಿಂದ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಡೆಯಲಿರುವ ಪಂದ್ಯದಲ್ಲಿ 15 ಸದಸ್ಯರ ಮಹಿಳಾ ತಂಡವನ್ನು ಹರ್ಮನ್​ಪ್ರೀತ್ ಕೌರ್ ಮುನ್ನಡೆಸಲಿದ್ದಾರೆ. ಉಪನಾಯಕಿಯಾಗಿ ಸ್ಮೃತಿ ಮಂದಾನ ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ ವಿಕೆಟ್ ಕೀಪರ್‌ಗಳಾಗಿ ರಿಚಾ ಘೋಷ್ ಹಾಗೂ ಯಾಸ್ತಿಕಾ ಭಾಟಿಯಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. 

ಕನ್ನಡತಿ ಶ್ರೇಯಾಂಕಾ ಪಾಟೀಲ್‌ಗೆ ಸ್ಥಾನ

ಈ ತಂಡದಲ್ಲಿ ಕರ್ನಾಟಕದ ಯುವ ಆಲ್‌ರೌಂಡರ್‌ ಶ್ರೇಯಾಂಕಾ ಪಾಟೀಲ್ ಸ್ಥಾನ ಪಡೆದಿದ್ದು, ಅದಕ್ಕೂ ಮುನ್ನ ಅವರು ಫಿಟ್ನೆಸ್ ಅನ್ನು ಸಾಬೀತುಪಡಿಸಬೇಕಾಗಿದೆ. ಕಳೆದ ಏಷ್ಯಾಕಪ್ ಟೂರ್ನಿಯ ವೇಳೆ ಶ್ರೇಯಾಂಕಾ ಗಾಯಗೊಂಡಿದ್ದರು. ಇದಾದ ಬಳಿಕ ಅವರು ಟೀಮ್ ಇಂಡಿಯಾ ಪರ ಯಾವುದೇ ಪಂದ್ಯ ಆಡಿಲ್ಲ. ಹೀಗಾಗಿ ಫಿಟ್ನೆಸ್ ಸಾಬೀತುಪಡಿಸಲು ಸೂಚಿಸಲಾಗಿದೆ.

 ಹಾಗೆಯೇ ವಿಕೆಟ್ ಕೀಪರ್ ಆಗಿ ಆಯ್ಕೆಯಾಗಿರುವ ಯಾಸ್ತಿಕಾ ಭಾಟಿಯಾ ಕೂಡ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ಅವರು ಸಹ ಫಿಟ್ನೆಸ್ ಟೆಸ್ಟ್‌ಗೆ ಒಳಗಾಗಬೇಕಿದೆ. ಇನ್ನು ಈ ತಂಡದಲ್ಲಿ ವೇಗಿಗಳಾಗಿ ಪೂಜಾ ವಸ್ತ್ರಾಕರ್ ಹಾಗೂ ರೇಣುಕಾ ಸಿಂಗ್ ಠಾಕೂರ್ ಸ್ಥಾನ ಪಡೆದಿದ್ದು, ಸ್ಪಿನ್ನರ್‌ಗಳಾದ ರಾಧಾ ಯಾದವ್ ಮತ್ತು ಆಶಾ ಸೋಭಾನ ಕಾಣಿಸಿಕೊಂಡಿದ್ದಾರೆ.

ಭಾರತ ಟಿ20 ತಂಡ

ಹರ್ಮನ್​ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂದಾನ (ಉಪನಾಯಕಿ), ಶೆಫಾಲಿ ವರ್ಮಾ, ದೀಪ್ತಿ ಶರ್ಮಾ, ಜೆಮಿಮಾ ರೊಡ್ರಿಗಸ್, ರಿಚಾ ಘೋಷ್ (ವಿಕೆಟ್ ಕೀಪರ್), ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್ ಠಾಕೂರ್, ದಯಾಳನ್ ಹೇಮಲತಾ, ಆಶಾ ಶೋಭನಾ, ರಾಧಾ ಯಾದವ್, ಶ್ರೇಯಾಂಕಾ ಪಾಟೀಲ್, ಸಜನಾ ಸಜೀವನ್.

ಮೀಸಲು ಆಟಗಾರ್ತಿಯರು: ಉಮಾ ಚೆಟ್ರಿ, ತನುಜಾ ಕನ್ವರ್ ಮತ್ತು ಸೈಮಾ ಠಾಕೂರ್.

ಭಾರತದ ಟಿ20 ವಿಶ್ವಕಪ್ ಪಂದ್ಯಗಳ ವೇಳಾಪಟ್ಟಿ

1. ಅಕ್ಟೋಬರ್ 4, ಶುಕ್ರವಾರ: ಭಾರತ vs ನ್ಯೂಝಿಲೆಂಡ್, ದುಬೈ

2. ಅಕ್ಟೋಬರ್ 6, ಭಾನುವಾರ: ಭಾರತ vs ಪಾಕಿಸ್ತಾನ, ದುಬೈ

3. ಅಕ್ಟೋಬರ್ 9, ಬುಧವಾರ: ಭಾರತ vs ಶ್ರೀಲಂಕಾ, ದುಬೈ

4. ಅಕ್ಟೋಬರ್ 13, ಭಾನುವಾರ: ಭಾರತ vs ಆಸ್ಟ್ರೇಲಿಯಾ, ಶಾರ್ಜಾ

ಅಕ್ಟೋಬರ್ 17 ರಂದು ಮೊದಲ ಸೆಮಿಫೈನಲ್ ನಡೆಯಲಿದ್ದು, 18 ರಂದು ಎರಡನೇ ಸೆಮಿಫೈನಲ್ ಜರುಗಲಿದೆ.  ಅಕ್ಟೋಬರ್ 20 ರಂದು ಫೈನಲ್ ಪಂದ್ಯಕ್ಕೆ ದುಬೈ ಅಂತಾರಾಷ್ಟ್ರೀಯ ಸ್ಟೇಡಿಯಂ ಆತಿಥ್ಯವಹಿಸಲಿದೆ.

ಈ ಮೊದಲು ಮಹಿಳಾ ಟಿ20 ವಿಶ್ವಕಪ್‌ ಪಂದ್ಯಾವಳಿಯನ್ನು ಬಾಂಗ್ಲಾ ದೇಶದಲ್ಲಿ ಆಯೋಜಿಸಲಾಗಿತ್ತು. ಆದರೆ ಬಾಂಗ್ಲಾದಲ್ಲಿ ನಡೆಯುತ್ತಿರುವ ಹಿಂಸಾಚಾರಗಳ ಹಿನ್ನೆಲೆಯಲ್ಲಿ ಟೂರ್ನಿಯನ್ನು ಯುಎಇಗೆ ಶಿಫ್ಟ್ ಮಾಡಲಾಗಿದೆ.

Tags:    

Similar News