BIFFes 2025 | ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ನಟಿ ಶಬಾನಾ ಅಜ್ಜಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ
70ರ ದಶಕದಲ್ಲಿ ಕನ್ನೇಶ್ವರ ರಾಮ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿ ಕನ್ನಡ ಸಿನಿರಸಿಕರ ಹೃದಯಗೆದ್ದ ಶಬಾನಾ ಅವರು ದಕ್ಷಿಣ ಭಾರತದ ಚಿತ್ರಗಳು ಹಾಗೂ ಹಿಂದಿ ಭಾಷೆಯ ಚಲನಚಿತ್ರಗಳಲ್ಲಿ ನಟಿಸಿ, ಸೈ ಎನಿಸಿಕೊಂಡವರು;
16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಜೀವಮಾನ ಸಾಧನೆ ಪ್ರಶಸ್ತಿಗೆ ಹಿರಿಯ ನಟಿ ಶಬಾನಾ ಅಜ್ಜಿ ಅವರು ಆಯ್ಕೆಯಾಗಿದ್ದಾರೆ.
2024-25ನೇ ಸಾಲಿನ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಜೀವಮಾನ ಸಾಧನೆ ಪ್ರಶಸ್ತಿ ಆಯ್ಕೆಗೆ ರಚಿಸಿದ್ದ ಆಯ್ಕೆ ಸಮಿತಿಯು ಮೂವರು ಸಂಭಾವ್ಯರನ್ನು ಆಯ್ಕೆ ಮಾಡಿ ಪಟ್ಟಿ ಸಲ್ಲಿಸಿತ್ತು. ಆಯ್ಕೆಯಾಗಿದ್ದ ಮೂವರಲ್ಲಿ ನಟಿ ಶಬಾಬಾ ಅಜ್ಜಿ ಅವರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಎಕ್ಸ್ ಖಾತೆಯಲ್ಲ ಅಭಿನಂದನೆ ಸಲ್ಲಿಸಿದ್ದು, "ಬೆಂಗಳೂರಿನಲ್ಲಿ ಆಯೋಜಿಸಿರುವ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆಯಾದ ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶ್ರೀಮತಿ ಶಬಾನಾ ಆಜ್ಮಿ ಅವರಿಗೆ ಅಭಿನಂದನೆಗಳು," ಎಂದಿದ್ದಾರೆ.
70ರ ದಶಕದಲ್ಲಿ ಕನ್ನೇಶ್ವರ ರಾಮ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿ ಕನ್ನಡ ಸಿನಿರಸಿಕರ ಹೃದಯಗೆದ್ದ ಶಬಾನಾ ಅವರು ದಕ್ಷಿಣ ಭಾರತದ ಚಿತ್ರಗಳು ಹಾಗೂ ಹಿಂದಿ ಭಾಷೆಯ ಚಲನಚಿತ್ರಗಳಲ್ಲಿ ನಟಿಸಿ, ಸೈ ಎನಿಸಿಕೊಂಡವರು. ಸುಮಾರು 50 ವರ್ಷಗಳ ಅವರ ಕಲಾಸೇವೆಗೆ ಸಂದ ಈ ಗೌರವವು ಪ್ರಶಸ್ತಿಯ ಘನತೆಯನ್ನು ಹೆಚ್ಚಿಸಿದೆ ಎಂದು ಅವರು ತಿಳಿಸಿದ್ದಾರೆ.
ಶಬಾನಾ ಅಜ್ಜಿ ಸೆಪ್ಟೆಂಬರ್ 18, 1950ರಂದು ಹೈದರಾಬಾದ್‌ನಲ್ಲಿ ಪ್ರಸಿದ್ಧ ಕವಿ ಕೈಫಿ ಅಜ್ಜಿ ಮತ್ತು ಶೌಕತ್ ಅಜ್ಜಿ ದಂಪತಿಗೆ ಜನಿಸಿದರು. ಶಬಾನಾ ತಮ್ಮ 24ನೇ ವಯಸ್ಸಿನಲ್ಲಿ ಚಲನಚಿತ್ರ ವೃತ್ತಿಜೀವನವನ್ನು ಪ್ರಾರಂಭಿಸಿದರು. ಅವರ ಮೊದಲ ಚಿತ್ರ 'ಅಂಕುರ್'. 1974 ರಲ್ಲಿ ಬಿಡುಗಡೆಯಾದ ಈ ಚಿತ್ರದಲ್ಲಿ ಅವರ ನಟನೆಯು ಹೆಚ್ಚಿನ ಮೆಚ್ಚುಗೆ ಪಡೆಯಿತು.
ಶಬಾನಾ ಅವರ ಮೊದಲ ಚಿತ್ರಕ್ಕೆ ಅತ್ಯುತ್ತಮ ನಟಿ ರಾಷ್ಟ್ರೀಯ ಪ್ರಶಸ್ತಿ ಲಭಿಸಿತು. ಅಂಕುರ್ ಬಳಿಕ ಶಬಾನಾ 1982ರ ಚಿತ್ರ 'ಆರ್ಥ್', 1983ರ ಚಿತ್ರ 'ಕಂದಹಾರ್' ಮತ್ತು 1984ರ ಚಿತ್ರ 'ಪಾರ್'ಗಾಗಿ ಅತ್ಯುತ್ತಮ ನಟಿಗಾಗಿ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದಿದ್ದಾರೆ. ಶಬಾನಾ ಅಜ್ಜಿ ಕೂಡ ಸತತ ಮೂರು ವರ್ಷಗಳ ಕಾಲ ರಾಷ್ಟ್ರೀಯ ಪ್ರಶಸ್ತಿ ಗೆದ್ದ ನಟಿ. 1999ರ 'ಗಾಡ್‌ಮದರ್' ಚಿತ್ರಕ್ಕಾಗಿ ಶಬಾನಾ ತಮ್ಮ ಐದನೇ ಅತ್ಯುತ್ತಮ ನಟಿ ರಾಷ್ಟ್ರೀಯ ಪ್ರಶಸ್ತಿಯನ್ನು ಗೆದಿದ್ದಾರೆ.
ಶಬಾನಾ ಅಜ್ಜಿ 'ಫೈರ್', 'ನಿಶಾಂತ್', 'ಜುನೂನ್', 'ತುಮ್ಹಾರಿ ಅಮೃತ', 'ಫೈರ್', 'ಮಕ್ಕಿ' ಮತ್ತು 'ಮೃತ್ಯುದಂಡ್' ಚಿತ್ರಗಳಲ್ಲಿ ಕೆಲಸ ಮಾಡಿ ಯಶಸ್ವಿ ನಟಿ ಎಂಬ ಪಟ್ಟಿಗೆ ಸೇರ್ಪಡೆಯಾದರು. ಶಬಾನಾ ಅಜ್ಜಿಯವರ ಸಿನಿಮಾ ಪ್ರಯಾಣ ಇನ್ನೂ ಮುಂದುವರಿದಿದೆ. ಜುಲೈ 2023ರಲ್ಲಿ ಬಿಡುಗಡೆಯಾದ ಕರಣ್ ಜೋಹರ್ ಅವರ 'ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ' ಚಿತ್ರದಲ್ಲಿ ನಟಿಸಿದ್ದಾರೆ.